ಹೊಸ ಮೈಲಿಗಲ್ಲು ಸಾಧಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ವನ್ನು  ಕೊಂಡಾಡಿದ ಪ್ರಧಾನಿ 

66

ನವದೆಹಲಿ: ಅಮೆರಿಕಾದ ಸಂವಹನ ಉಪಗ್ರಹ ‘ಬ್ಲೂಬರ್ಡ್‌ ಬ್ಲಾಕ್‌–2’ ಅನ್ನು ಇಸ್ರೊದ ಅತ್ಯಂತ ಭಾರವಾದ ಎಲ್‌ವಿಎಂ3–ಎಂ6 ರಾಕೆಟ್ ನಭಕ್ಕೆ ಹೊತ್ತೊಯ್ಯುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದ್ದು, ಇದರ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದಾರೆ.

ಬ್ಲೂಬರ್ಡ್ -2 ಯಶಸ್ವಿ ಉಡಾವಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಂಚಿಕೊಂಡಿದ್ದು, ಇಸ್ರೋ ಸಾಧನೆಯನ್ನು ಶ್ಲಾಘಿಸಿದ್ದಾರೆ. ಇದು ಭಾರತದ ಬಾಹ್ಯಾಕಾಶ ಕ್ಷೇತ್ರದ ಒಂದು ಪ್ರಮುಖ ಸಾಧನೆಯಾಗಿದೆ ಎಂದು ಹೇಳಿದ್ದಾರೆ.

ಇದರೊಂದಿಗೆ ದೇಶದ ಅತಿ ಭಾರದ ಉಡ್ಡಯನ ಸಾಮರ್ಥ್ಯವನ್ನು ಮತ್ತಷ್ಟು ಬಲಗೊಳಿಸಿದೆ. ಜಾಗತಿಕ ವಾಣಿಜ್ಯ ಉಡ್ಡಯನ ಮಾರುಕಟ್ಟೆಯಲ್ಲಿ ನಮ್ಮ ಪ್ರಗತಿಯನ್ನು ಬಲಿಷ್ಠಗೊಳಿಸುತ್ತಿದೆ ಎಂದು ತಿಳಿಸಿದ್ದಾರೆ.

‘ಆತ್ಮನಿರ್ಭರ ಭಾರತ’ ಉಪಕ್ರಮದತ್ತ ನಮ್ಮ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ. ಇದರ ಹಿಂದೆ ಶ್ರಮ ವಹಿಸಿರುವ ನಮ್ಮ ಬಾಹ್ಯಾಕಾಶ ವಿಜ್ಞಾನಿಗಳು ಹಾಗೂ ಎಂಜಿನಿಯರ್‌ಗಳಿಗೆ ಅಭಿನಂದನೆಗಳು.

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತಷ್ಟು ಎತ್ತರಕ್ಕೆ ಬೆಳೆಯುತ್ತಲೇ ಇದೆ. ಯುವಜನರ ಪ್ರಯತ್ನದಿಂದ ಭಾರತದ ಬಾಹ್ಯಾಕಾಶ ಕಾರ್ಯಕ್ರಮವು ಹೆಚ್ಚು ಪರಿಣಾಮಕಾರಿಯೆನಿಸಿದೆ.

ಅತಿ ಭಾರದ ಎಲ್‌ವಿಎಂ3 ಯೋಜನೆಯೊಂದಿಗೆ ಗಗನಯಾನದಂತಹ ಭವಿಷ್ಯದ ಕಾರ್ಯಕ್ರಮಗಳಿಗೆ ಹೆಚ್ಚಿನ ಉತ್ತೇಜನ ಸಿಗುತ್ತದೆ ಎಂದು ಹೇಳಿದ್ದಾರೆ”

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ,...

ರಾಜ್ಯಾದ್ಯಂತ ಹೋಮ್ ಸ್ಟೇ ನೋಂದಣಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ; 500 ಹೋಮ್‌ಸ್ಟೇ ಮಾಲೀಕರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್‌ಸ್ಟೇಗಳ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಲ್ಲಿಯವರೆಗೆ 500ಕ್ಕೂ ಹೆಚ್ಚು ಹೋಮ್‌ಸ್ಟೇ...

ಬಿಡದಿ ಟೌನ್‌ಶಿಪ್‌ : ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು: ಬಿಡದಿ ಟೌನ್ ಶಿಪ್ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ...

ಹೊಸಮುಖಗಳಿಗೆ ಆದ್ಯತೆ ನೂತನ ಸಚಿವರ ಪರಿಷ್ಕೃತ ಪಟ್ಟಿ ಹೈಕಮಾಂಡ್ ಬಳಿ; ಸಿಎಂ-ಮಾಜಿ ಸಿಎಂ ಬೆಂಗಳೂರಿಗೆ ವಾಪಸ್

ದೆಹಲಿದಲ್ಲಿ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ...