ಗಣಿಗಾರಿಕೆ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಕೇಂದ್ರದ ಆದೇಶ

58

ಹೊಸದಿಲ್ಲಿ : ಕೊನೆಗೂ ಅರಾವಳಿ ಜನಾಂದೋಲನಕ್ಕೆ ಲಭಿಸಿತು ಐತಿಹಾಸಿಕ ಜಯ. ಅರಾವಳಿ ಶ್ರೇಣಿಯಲ್ಲಿ ಹೊಸದಾಗಿ ಗಣಿಗಾರಿಕೆ ಗುತ್ತಿಗೆ ನೀಡುವುದು ನಿಷಿದ್ಧ. ಗಣಿಗಾರಿಕೆ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಕೇಂದ್ರದ ಆದೇಶ.

ಅರಾವಳಿ ಬೆಟ್ಟಗಳು ಮತ್ತು ಶ್ರೇಣಿಗಳ ವ್ಯಾಖ್ಯಾನದ ಕುರಿತು ಇತ್ತೀಚೆಗೆ ಘೋಷಿಸಲಾದ ಹೊಸ ನಿಯಮಗಳ ವಿವಾದದ ಮಧ್ಯೆ, ಕೇಂದ್ರ ಸರ್ಕಾರವು ಅರಾವಳಿ ಪರ್ವತಗಳ ಸಾಲಿನಲ್ಲಿ ಹೊಸದಾಗಿ ಗಣಿಗಾರಿಕೆ ಗುತ್ತಿಗೆಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಆದೇಶ ಹೊರಡಿಸಿದೆ.

ಸುಸ್ಥಿರ ಗಣಿಗಾರಿಕೆಗಾಗಿ ಸಮಗ್ರ ನಿರ್ವಹಣಾ ಯೋಜನೆಯನ್ನು ಸಿದ್ಧಪಡಿಸುವವರೆಗೆ ಸುಪ್ರೀಂಕೋರ್ಟ್, ಹೊಸ ಗಣಿಗಾರಿಕೆ ಗುತ್ತಿಗೆಗಳನ್ನು ಸ್ಥಗಿತಗೊಳಿಸಿದ ಕೆಲವು ದಿನಗಳ ನಂತರ ಈ ಆದೇಶ ಬಂದಿದೆ. ಅರಾವಳಿ ಪರ್ವತಗಳನ್ನು ಗಣಿಗಾರಿಕೆ ಕೊಲ್ಲುತ್ತಿದೆ ಎಂಬ ಪರಿಸರವಾದಿಗಳ ಆತಂಕ ಈಗ ದೂರವಾಗಿದೆ.

“ದೆಹಲಿಯಿಂದ ಗುಜರಾತ್‌ವರೆಗೆ ವ್ಯಾಪಿಸಿರುವ ಸಂಪೂರ್ಣ ಅರಾವಳಿ ಶ್ರೇಣಿಯ ಸಂರಕ್ಷಣೆ ಮತ್ತು ರಕ್ಷಣೆಯತ್ತ ಒಂದು ಪ್ರಮುಖ ಹೆಜ್ಜೆಯಾಗಿ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಅರಾವಳಿ ಶ್ರೇಣಿಯಲ್ಲಿ ಯಾವುದೇ ಹೊಸ ಗಣಿಗಾರಿಕೆ ಗುತ್ತಿಗೆಗಳನ್ನು ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲು ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡಿದೆ” ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

“ಈ ನಿಷೇಧವು ಇಡೀ ಅರಾವಳಿ ಭೂದೃಶ್ಯದಾದ್ಯಂತ ಏಕರೂಪವಾಗಿ ಅನ್ವಯಿಸುತ್ತದೆ ಮತ್ತು ಶ್ರೇಣಿಯ ಸಮಗ್ರತೆಯನ್ನು ಕಾಪಾಡುವ ಉದ್ದೇಶವನ್ನು ಹೊಂದಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. 2016ರಲ್ಲಿ ಕೆಮ್ಮಣ್ಣುಗುಂಡಿಯಲ್ಲಿ ಗಣಿಗಾರಿಕೆಗೆ ನಿಷೇಧ ಆದೇಶ ಜಾರಿಯಾಗಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

ಗುಜರಾತ್‌ನಿಂದ ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್‌ಸಿಆರ್) ವರೆಗೆ ವಿಸ್ತರಿಸಿರುವ ಅರಾವಳಿಗಳನ್ನು, ನಿರಂತರ ಭೂವೈಜ್ಞಾನಿಕ ಪರ್ವತ ಶ್ರೇಣಿಯಾಗಿ ರಕ್ಷಿಸುವುದು ಮತ್ತು ಎಲ್ಲಾ ಅನಿಯಂತ್ರಿತ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸುವುದು ಹೊಸದಾಗಿ ಜಾರಿ ಮಾಡಲಾದ ನಿಯಮಗಳ ಅಂತಿಮ ಗುರಿಯಾಗಿದೆ.

ಪರಿಸರ, ಭೂವೈಜ್ಞಾನಿಕ ಮತ್ತು ಭೂದೃಶ್ಯ ಮಟ್ಟದ ಪರಿಗಣನೆಗಳ ಆಧಾರದ ಮೇಲೆ, ಕೇಂದ್ರವು ಈಗಾಗಲೇ ಗಣಿಗಾರಿಕೆಗೆ ನಿಷೇಧಿಸಿರುವ ಪ್ರದೇಶಗಳ ಜೊತೆಗೆ, ಇಡೀ ಅರಾವಳಿಯಲ್ಲಿ ಗಣಿಗಾರಿಕೆಯನ್ನು ನಿಷೇಧಿಸಬೇಕಾದ ಹೆಚ್ಚುವರಿ ಪ್ರದೇಶಗಳು ಮತ್ತು ವಲಯಗಳನ್ನು ಗುರುತಿಸಲು, ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿಗೆ (ಐಸಿಎಫ್‌ಆರ್‌ಇ) ಸೂಚನೆ ನೀಡಿದೆ.

“ಅರಾವಳಿಯಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಗಣಿಗಳಿಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರಗಳು ಎಲ್ಲಾ ಪರಿಸರ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಮತ್ತು ಸುಪ್ರೀಂ ಕೋರ್ಟ್‌ನ ಆದೇಶಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಕೇಂದ್ರ ಸರ್ಕಾರ ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್‌ ಸರ್ಕಾರಗಳಿಗೆ ತಿಳಿಸಿದೆ.

ಥಾರ್ ಮರುಭೂಮಿಯು ಪೂರ್ವಕ್ಕೆ ಹರಡುವುದನ್ನು ತಡೆಯಲು, “ಹಸಿರು ತಡೆಗೋಡೆ”ಯಾಗಿ ಅರಾವಳಿಗಳ ಪಾತ್ರವನ್ನು ಸುಪ್ರೀಂಕೋರ್ಟ್‌ ಒತ್ತಿ ಹೇಳಿತ್ತು. ಅದರ ಜೀವವೈವಿಧ್ಯತೆ ಮತ್ತು ಹವಾಮಾನ ಮಹತ್ವವನ್ನು ಎತ್ತಿ ತೋರಿಸಿತ್ತು.

ಅಸ್ತಿತ್ವದಲ್ಲಿರುವ ಗಣಿಗಳಿಗೆ ಸರ್ವೋಚ್ಛ ನ್ಯಾಯಾಲಯ ಮತ್ತು ನಂತರದ ಕೇಂದ್ರದ ನಿರ್ದೇಶನವು, ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಪರಿಸರ ಸುರಕ್ಷತೆಗಳೊಂದಿಗೆ ಕಟ್ಟುನಿಟ್ಟಾದ ಅನುಸರಣೆ ಮತ್ತು ಕಟ್ಟುನಿಟ್ಟಾದ ನಿಯಂತ್ರಣವನ್ನು ಬಯಸುತ್ತದೆ.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ನೇತೃತ್ವದ ಸಮಿತಿಯು ಪ್ರಸ್ತಾಪಿಸಿದ ಅರಾವಳಿ ಬೆಟ್ಟಗಳು ಮತ್ತು ಶ್ರೇಣಿಗಳ ಏಕರೂಪದ ವೈಜ್ಞಾನಿಕ ವ್ಯಾಖ್ಯಾನವನ್ನು ಸುಪ್ರೀಂಕೋರ್ಟ್‌ ಒಪ್ಪಿಕೊಂಡಿದೆ.

“ಸುಸ್ಥಿರ ಗಣಿಗಾರಿಕೆಗಾಗಿ ನಿರ್ವಹಣಾ ಯೋಜನೆಯನ್ನು ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ ಮೂಲಕ ಅಂತಿಮಗೊಳಿಸುವವರೆಗೆ, ಯಾವುದೇ ಹೊಸ ಗಣಿಗಾರಿಕೆ ಗುತ್ತಿಗೆಗಳನ್ನು ನೀಡಬಾರದು” ಎಂದು ಸ್ಪಷ್ಟವಾಗಿ ನಿರ್ದೇಶಿಸಿದೆ.”

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...