ಕೋಗಿಲೆ ಕ್ರಾಸ್ ಪ್ರಕರಣ ಶೆಡ್ ಹಾಕಿಕೊಂಡವರಿಗೆಲ್ಲ ಮನೆ ಕೊಟ್ರೆ ತಪ್ಪು ಸಂದೇಶ:ಸಚಿವ ಕೃಷ್ಣಭೈರೇಗೌಡ

46

ಕೋಗಿಲು ಕ್ರಾಸ್ ಪ್ರದೇಶದ ನಿರಾಶ್ರಿತರಿಗೆ ಮನೆ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಕಾನೂನುಬದ್ಧ ಹಾಗೂ ಮಾನವೀಯ ಕ್ರಮ ಅನುಸರಿಸಲು ತೀರ್ಮಾನಿಸಿದೆ. ಈ ಸಂಬಂಧ ವಿಕಾಸಸೌಧದಲ್ಲಿರುವ ಸಚಿವ ಕೃಷ್ಣ ಭೈರೇಗೌಡ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಸರ್ಕಾರಿ ಜಮೀನು ಒತ್ತುವರಿ ವಿಚಾರವಾಗಿ ಸ್ಪಷ್ಟ ನಿಲುವು ಕೈಗೊಳ್ಳಲಾಗಿದೆ. ಸರ್ಕಾರಿ ಜಮೀನಿನಲ್ಲಿ ಯಾರಿಗಾದರೂ ಹಣ ನೀಡಿ ಒತ್ತುವರಿ ಮಾಡಿಸಿಕೊಂಡಿದ್ದರೆ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು. ಅಲೆಮಾರಿಗಳು ತಾತ್ಕಾಲಿಕವಾಗಿ ಬಂದು ಹೋಗುತ್ತಾರೆ. ಅವರಿಗೆ ಭೂ ಒತ್ತುವರಿ ಅಗತ್ಯವಿಲ್ಲ.
ಆದರೆ, ಉದ್ದೇಶಪೂರ್ವಕವಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡುವವರನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ. ಸರ್ಕಾರಿ ಜಮೀನಿನಲ್ಲಿ ಶೆಡ್ ಹಾಕಿದ ತಕ್ಷಣ ಮನೆ ನೀಡುವುದು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತದೆ. ಇದರಿಂದ ಸರ್ಕಾರವೇ ಪರೋಕ್ಷವಾಗಿ ಭೂ ಒತ್ತುವರಿಗೆ ಕುಮ್ಮಕ್ಕು ನೀಡಿದಂತಾಗುತ್ತದೆ.
ಈಗಾಗಲೇ ಸಾವಿರಾರು ಜನ ಸರ್ಕಾರಿ ಮನೆಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವಾಗ, ಒತ್ತುವರಿದಾರರಿಗೆ ಏಕಾಏಕಿ ಮನೆ ನೀಡುವುದು ನ್ಯಾಯಸಮ್ಮತವಲ್ಲ ಎಂದು ಕೃಷ್ಣ ಭೈರೇಗೌಡ ಹೇಳಿದರು. ಕೋಗಿಲುನಲ್ಲಿ ನಡೆದ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡವರಿಗೆ ಮನೆಗಳನ್ನು ಒದಗಿಸುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಇಂದು ಪ್ರತಿಭಟನೆ ನಡೆಸಿತ್ತು

Leave a comment

Leave a Reply

Your email address will not be published. Required fields are marked *

Related Articles

ಗ್ಯಾರೆಂಟಿ ಯೋಜನೆ ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು...

ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆಲುವಿನ ನಗೆ

“ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್...

ಕೊಲ್ಲೂರು ಮೂಕಾಂಬಿಕಾ ತಾಯಿಯ ದರ್ಶನ ಪಡೆದ ಉದ್ಯಮಿ ಅನಂತ ಅಂಬಾನಿ

“ಉಡುಪಿ: ಸದ್ದು ಗದ್ದಲವಿಲ್ಲದೆ ದೇಶದ ಪ್ರತಿಷ್ಠಿತ ಉದ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅಂಬಾನಿ ಕುಟುಂಬದ ಅನಂತ ಅಂಬಾನಿ...

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ

“ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ...