ಕೇಂದ್ರ ಸಚಿವ ಸೋಮಣ್ಣ ಅವರತ್ತ ಕುರ್ಚಿ ಎಸೆದು ಮುತ್ತಿಗೆ ಹಾಕಿ ಕೈ ಕಾರ್ಯಕರ್ತರ ಆಕ್ರೋಶ

50
ಕೇಂದ್ರ ಸಚಿವ ಸೋಮಣ್ಣ ಅವರತ್ತ ಕುರ್ಚಿ ಎಸೆದು ಕೈ ಕಾರ್ಯಕರ್ತರ ಆಕ್ರೋಶ ಕೊಪ್ಪಳದ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಭಾರಿ ಹೈಡ್ರಾಮಾ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವ ವಿ. ಸೋಮಣ್ಣ ಅವರತ್ತ ಕುರ್ಚಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಿಗಿ ಹಾಗೂ ಸಂಸದ ಕೆ. ರಾಜಶೇಖರ್ ಹಿಟ್ನಾಳ್ ಹೆಸರನ್ನು ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸೇರಿಸಿಲ್ಲ. ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಕೇಂದ್ರ ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸೋಮಣ್ಣ ಅವರ ಕಾರಿಗೂ ಮುತ್ತಿಗೆ ಹಾಕಿ ಆಕ್ರೋಶ ಪ್ರದರ್ಶಿಸಿದ್ದಾರೆ
ಇದರಿಂದ ತೀವ್ರ ಮುಜುಗರ ಅನುಭವಿಸಿದ ಸೋಮಣ್ಣ ಕೇವಲ 5 ನಿಮಿಷ ಕಾಲ ಸ್ಥಳದಲ್ಲಿದ್ದು ತೆರಳಿದರು. ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ.
ಸುಮಾರು 27 ಕೋಟಿ. ರೂಪಾಯಿ ವೆಚ್ಚದ ಹಿಟ್ನಾಳ್, ಮುನಿರಾಬಾದ್, ಗಿಣಗೇರಾ ಮೇಲ್ಸೇತುವೆ ಕಾಮಗಾರಿ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಣದಲ್ಲಿ ನಡೆಯಲಿದೆ ಎಂದು ಸೋಮಣ್ಣ ಈ ವೇಳೆ ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...