ಪೌರಾಯುಕ್ತೆಗೆ ಧಮ್ಕಿ 2 ಎಫ್ ಐಆರ್ ದಾಖಲು ಬಂಧನ ಭೀತಿಯಿಂದ ತಲೆಮರೆಸಿಕೊಂಡ ಆರೋಪಿ ರಾಜೀವ್ ಗೌಡ

38

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಸಂಕಷ್ಟ ಎದುರಾಗಿದೆ. ರಾಜೀವ್ ಗೌಡ ವಿರುದ್ಧ ಪೌರಾಯುಕ್ತ ಅಮೃತ ಗೌಡ ಪೊಲೀಸರಿಗೆ ದೂರು ನೀಡಿದ್ದಾರೆ.
ಮತ್ತೊಂದೆಡೆ ಸ್ಥಳೀಯ ಜೆಡಿಎಸ್ ಶಾಸಕ ಬಿಎಂ ರವಿಕುಮಾರ್ ವಿರುದ್ಧವೂ ರಾಜೀವ್ ಗೌಡ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಜೆಡಿಎಸ್ ವತಿಯಿಂದ ದೂರು ನೀಡಲಾಗಿದೆ.
ಹೀಗಾಗಿ 2 ಎಫ್‌ಐಆರ್‌ಗಳು ದಾಖಲಾಗಿವೆ. ತಲೆಮರೆಸಿಕೊಂಡಿರುವ ರಾಜೀವ್ ಗೌಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ. ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಆರೋಪಿ ರಾಜೀವ್ ಗೌಡ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ. ಫೋನ್ ಸಹ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.
ಜನಪ್ರತಿನಿಧಿ ಅಲ್ಲದಿದ್ದರೂ ಆಡಳಿತ ನಡೆಸಲು ಯತ್ನ ಆರೋಪ ಶಿಡ್ಲಘಟ್ಟ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರು ಇದ್ದರೂ ಅಲ್ಲಿ ದರ್ಬಾರ್ ನಡೆಸಲು ರಾಜೀವ್ ಗೌಡ ಯತ್ನಿಸುತ್ತಿದ್ದಾರೆ. ಯಾರೇ ಅಧಿಕಾರಿಗಳು ಬಂದರೂ ತಮ್ಮ ಸಮ್ಮತಿ ಪಡೆಯುವಂತೆ ಒತ್ತಡ ಹೇರುತ್ತಿದ್ದರು. ವಿವಿಧ ಇಲಾಖೆಗಳಲ್ಲಿ ತಮ್ಮದೇ ಮಾತು ನಡೆಯಬೇಕು ಎಂದು ಒತ್ತಡ ಹೇಳುತ್ತಿದ್ದರು ಎಂಬ ಆರೋಪಗಳು ಕೂಡ ಈಗ ಕೇಳಿ ಬಂದಿವೆ.

ಶಿಡ್ಲಘಟ್ಟದ ಕೋಟೆ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿ ಕಟ್ಟಿದ್ದ ಬ್ಯಾನರ್ ತೆರವುಗೊಳಿಸಿದ್ದರಿಂದ ಸಿಟ್ಟಾಗಿದ್ದ ರಾಜೀವ್ ಗೌಡ ಪೌರಾಯುಕ್ತೆ ಅಮೃತ ಗೌಡಗೆ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲವಾಗಿ ನಿಂದಿಸಿದ್ದರು. ಈ ವಿಚಾರವಾಗಿ ಅಮೃತ ಗೌಡ ಮೇಲಧಿಕಾರಿಗಳಿಗೆ ದೂರು ನೀಡಿದ್ದರು. ನಂತರ, ಪೊಲೀಸರಿಗೂ ದೂರು ನೀಡಿದ್ದರು. ಈ ವಿಚಾರ ನಂತರ ತೀವ್ರ ಸ್ವರೂಪ ಪಡೆದುಕೊಂಡಿತ್ತು

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ,...

ರಾಜ್ಯಾದ್ಯಂತ ಹೋಮ್ ಸ್ಟೇ ನೋಂದಣಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ; 500 ಹೋಮ್‌ಸ್ಟೇ ಮಾಲೀಕರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್‌ಸ್ಟೇಗಳ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಲ್ಲಿಯವರೆಗೆ 500ಕ್ಕೂ ಹೆಚ್ಚು ಹೋಮ್‌ಸ್ಟೇ...

ಬಿಡದಿ ಟೌನ್‌ಶಿಪ್‌ : ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು: ಬಿಡದಿ ಟೌನ್ ಶಿಪ್ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ...

ಹೊಸಮುಖಗಳಿಗೆ ಆದ್ಯತೆ ನೂತನ ಸಚಿವರ ಪರಿಷ್ಕೃತ ಪಟ್ಟಿ ಹೈಕಮಾಂಡ್ ಬಳಿ; ಸಿಎಂ-ಮಾಜಿ ಸಿಎಂ ಬೆಂಗಳೂರಿಗೆ ವಾಪಸ್

ದೆಹಲಿದಲ್ಲಿ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ...