ಸಿಬ್ಬಂದಿಗಳಿಂದ ಲಂಚಕ್ಕೆ ಬೇಡಿಕೆ ಇಟ್ಟ ತಹಸಿಲ್ದಾರ್ ಆಡಿಯೋ ವೈರಲ್

57

“ಕಲಬುರಗಿ: ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ವಿರುದ್ಧ ಸಭೆಯಲ್ಲಿಯೇ ಸಿಬ್ಬಂದಿಯಿಂದ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ. ಮಲ್ಲಣ್ಣ ಯಲಗೋಡ ಹಾಗೂ ಸಿಬ್ಬಂದಿ ನಡುವಿನ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ.
ತಹಶಿಲ್ದಾರ್ ಕಾಟಕ್ಕೆ ಬೇಸತ್ತ ಸಿಬ್ಬಂದಿ ಮೇಲಧಿಕಾರಿಗಳಿಗೆ ದೂರು ನೀಡಿದ್ದಾರೆ. ವೈರಲ್ ಆಗಿರುವ ಆಡಿಯೋದಲ್ಲಿ ತಹಶಿಲ್ದಾರ್ ಮಲ್ಲಣ್ಣ, ನನ್ನ ಹೆಸರಲ್ಲಿ ನೀವು ಹಣ ಮಾಡುತ್ತೀರಿ. ಹಾಗಾಗಿ ನನಗೂ ಹಣ ನೀಡಿ ಎಂದು ಸಿಬ್ಬಂದಿಗಳಿಗೆ ಧಮ್ಕಿ ಹಾಕಿದ್ದಾರೆ.
ಆಡಿಯೋ ವೈರಲ್ ಆಗುತ್ತಿದ್ದಂತೆ ತಹಶಿಲ್ದಾರ್ ಮಲ್ಲಣ್ಣ, ಆರು ತಿಂಗಳ ಹಿಂದೆ ಕನ್ನಡ ಭವನದಲ್ಲಿ ನಡೆದಿದ್ದ ಕಾರ್ಯಕ್ರಮದ ವಿಚಾರವಾಗಿ ನಾನು ಸಿಬ್ಬಂದಿಗಳ ಸಭೆ ನಡೆಸಿ ಚರ್ಚಿಸಿದ್ದೆ ಹೊರತು ನಾನು ಯಾರ ಬಳಿಯೂ ಹಣ ಕೇಳಿಲ್ಲ. ನನ್ನ ವಿರುದ್ಧದ ಆರೋಪ ಸುಳ್ಳು ಎಂದಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ,...

ರಾಜ್ಯಾದ್ಯಂತ ಹೋಮ್ ಸ್ಟೇ ನೋಂದಣಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ; 500 ಹೋಮ್‌ಸ್ಟೇ ಮಾಲೀಕರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್‌ಸ್ಟೇಗಳ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಲ್ಲಿಯವರೆಗೆ 500ಕ್ಕೂ ಹೆಚ್ಚು ಹೋಮ್‌ಸ್ಟೇ...

ಬಿಡದಿ ಟೌನ್‌ಶಿಪ್‌ : ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು: ಬಿಡದಿ ಟೌನ್ ಶಿಪ್ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ...

ಹೊಸಮುಖಗಳಿಗೆ ಆದ್ಯತೆ ನೂತನ ಸಚಿವರ ಪರಿಷ್ಕೃತ ಪಟ್ಟಿ ಹೈಕಮಾಂಡ್ ಬಳಿ; ಸಿಎಂ-ಮಾಜಿ ಸಿಎಂ ಬೆಂಗಳೂರಿಗೆ ವಾಪಸ್

ದೆಹಲಿದಲ್ಲಿ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ...