ಬಾರ್ ಲೈಸನ್ಸ್: 25 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಅಬಕಾರಿ ಡಿ ಸಿ ಲೋಕಾಯುಕ್ತ ಬಲೆಗೆ

51

ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಅಬಕಾರಿ ಡಿಸಿಯನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಅಬಕಾರಿ ಡಿಸಿ ಜಗದೀಶ್ ನಾಯಕ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಮೈಕ್ರೋ ಬ್ರಿವೇರಿ, ಸಿಎಲ್ 7 ಲೈಸನ್ಸ್ ಗೆ 75 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಜಗದೀಶ್, ಮೊದಲ ಕಂತಿನ ಹಣವಾಗಿ 25 ಲಕ್ಷ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ವೇಳೆ ಅಬಕಾರಿ ಅಧೀಕ್ಷಕ ತಮ್ಮಣ್ಣ, ಮಧ್ಯವರ್ತಿ ಲಕ್ಕಪ್ಪ ಎಂಬುವವರನ್ನೂ ಬಂಧಿಸಲಾಗಿದೆ

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ,...

ರಾಜ್ಯಾದ್ಯಂತ ಹೋಮ್ ಸ್ಟೇ ನೋಂದಣಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ; 500 ಹೋಮ್‌ಸ್ಟೇ ಮಾಲೀಕರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್‌ಸ್ಟೇಗಳ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಲ್ಲಿಯವರೆಗೆ 500ಕ್ಕೂ ಹೆಚ್ಚು ಹೋಮ್‌ಸ್ಟೇ...

ಬಿಡದಿ ಟೌನ್‌ಶಿಪ್‌ : ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು: ಬಿಡದಿ ಟೌನ್ ಶಿಪ್ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ...

ಹೊಸಮುಖಗಳಿಗೆ ಆದ್ಯತೆ ನೂತನ ಸಚಿವರ ಪರಿಷ್ಕೃತ ಪಟ್ಟಿ ಹೈಕಮಾಂಡ್ ಬಳಿ; ಸಿಎಂ-ಮಾಜಿ ಸಿಎಂ ಬೆಂಗಳೂರಿಗೆ ವಾಪಸ್

ದೆಹಲಿದಲ್ಲಿ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ...