ಅಂಡರ್ 19 ವಿಶ್ವಕಪ್ ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 18 ರನ್ ರೋಚಕ ಜಯ

13

“ಕೊಲೊಂಬೋ: ಶ್ರೀಲಂಕಾದಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಶನಿವಾರ ಬಾಂಗ್ಲಾದೇಶದ ವಿರುದ್ಧ ಭಾರತ 18 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಸತತ ಎರಡನೇ ಜಯ ದಾಖಲಿಸಿತು. ಈ ಮೂಲಕ ಭಾರತ ಬಿ ಗುಂಪಿನಲ್ಲಿ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದೆ.

ಇಂದು ಶ್ರೀಲಂಕಾದ ಬೊಲೊವಿಯಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತದ ಅಂಡರ್ 19 ತಂಡದ ಆರಂಭ ಕಳಪೆಯಾಗಿತ್ತು.

ಆರಂಭಿಕ ನಾಯಕ ಆಯುಷ್ ಮಾತ್ರೆ(6), ವೇದಾಂತ್ ತ್ರಿವೇದಿ (0), ವಿಹಾನ್‌ ಮಲೋತ್ರಾ (7) ಬಾಂಗ್ಲಾ ಬೌಲರ್‌ಗಳ ರಣ ತಂತ್ರವನ್ನು ಮೆಟ್ಟಿನಿಲ್ಲುವಲ್ಲಿ ವಿಫಲರಾದರು. ವೈಭವ್ ಸೂರ್ಯವಂಶಿ(72)ಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ 48.4 ಓವರ್‌ಗಳಲ್ಲಿ 238 ರನ್‌ ಸೇರಿಸಿತು. ಬಾಂಗ್ಲಾದೇಶ ತಂಡದ ಪರ ಅಲ್ ಫಹಾದ್ 5 ವಿಕೆಟ್‌ ಕಬಳಿಸಿದರು.

ಪಂದ್ಯಕ್ಕೆ ಮಳೆ ಅಡ್ಡಿಯಾದ ಕಾರಣ 29 ಓವರ್‌ಗಳಲ್ಲಿ 165 ರನ್‌ಗಳ ಪರಿಷ್ಕೃತ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ 28.3 ಓವರ್‌ಗಳಲ್ಲಿ 145 ರನ್‌ಗಳಿಗೆ ಆಲೌಟ್ ಆಯಿತು. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಹಾನ್ ಮಲ್ಹೋತ್ರಾ ನಾಲ್ಕು ಓವರ್‌ಗಳಲ್ಲಿ 14 ರನ್‌ ನೀಡಿ 4 ವಿಕೆಟ್‌ಗಳನ್ನು ಪಡೆದು ಮಿಂಚಿದರು.

Leave a comment

Leave a Reply

Your email address will not be published. Required fields are marked *

Related Articles

ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಕೊಲಂಬೊದಲ್ಲಿ  ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ

2026ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಕೊಲಂಬೊದಲ್ಲಿ ನಡೆಯುವ ನಿರ್ಣಾಯಕ ಪಂದ್ಯಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು,...

ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿರುವ ಪಾಕಿಸ್ತಾನಕ್ಕೆ ಐಸಿಸಿ ಎಚ್ಚರಿಕೆ ಬಾಲ ಮುದುರಿಕೊಂಡ ಪಾಕಿಸ್ತಾನ

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿರುವ ಮಾತುಗಳನ್ನಾಡುತ್ತಿದ್ದ ಪಾಕಿಸ್ತಾನದ ಬಾಲ ಮುದುರಿಕೊಂಡಂತೆ...

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಿಕ ಪಂದ್ಯದಲ್ಲೇ ಭಾರತ ತಂಡಕ್ಕೆ ಭರ್ಜರಿ ಜಯದೊಂದಿಗೆ  ಟೂರ್ನಿಯಲ್ಲಿ ಶುಭಾರಂಭ

“ಮುಂಬೈ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಆರಂಭಿಕ ಪಂದ್ಯದಲ್ಲೇ ಭಾರತ ತಂಡ ಭರ್ಜರಿ ಜಯ ಸಾಧಿಸುವ...

6ನೇ ಬಾರಿಗೆಅಂಡರ್ 19 ವರ್ಲ್ಡ್ ಕಪ್ ಗೆದ್ದ ಭಾರತೀಯ ಯುವ ತಂಡ

ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ದಾಖಲೆಯ...