ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್  ಕ್ರಿಕೆಟ್ ಪಂದ್ಯಾಟ ಆಯೋಜಿಸಲು ರಾಜ್ಯ ಸರಕಾರದ ಅನುಮತಿ

26

“ಬೆಂಗಳೂರು: ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(KSCA)ಗೆ ರಾಜ್ಯ ಗೃಹ ಇಲಾಖೆ ಒಪ್ಪಿಗೆ ನೀಡಿದ್ದು ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂತರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.

ನ್ಯಾಯಮೂರ್ತಿ ಕುನ್ಹಾ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಲಾಗಿದೆ. ಸರ್ಕಾರ, ಸಂಬಂಧಿತ ಅಧಿಕಾರಿಗಳು ನಿಗದಿಪಡಿಸಿರುವ ನಿರ್ದಿಷ್ಟ ಷರತ್ತುಗಳು, ನಿಯಮಗಳನ್ನು ಪಾಲಿಸುವ ಷರತ್ತಿನೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನುಮತಿ ನೀಡಲಾಗಿದೆ.

ರಾಜ್ಯ ಸರ್ಕಾರದ ಎಲ್ಲಾ ನಿಗದಿತ ಕ್ರಮಗಳನ್ನು ಜಾರಿಗೆ ತರಲು ಕೆಎಸ್‌ಸಿಎ ಸಿದ್ಧವಾಗಿದೆ ಎಂದು ಕೆಎಸ್‌ಸಿಎ ಅಧಿಕೃತ ವಕ್ತಾರ ವಿನಯ್ ಮೃತ್ಯುಂಜಯ ದೃಢಪಡಿಸಿದರು. ಕೆಎಸ್‌ಸಿಎ ಅಧ್ಯಕ್ಷ ಬಿ. ಕೆ. ವೆಂಕಟೇಶ್ ಪ್ರಸಾದ್ ಶೀಘ್ರದಲ್ಲೇ ಪತ್ರಿಕಾಗೋಷ್ಠಿ ನಡೆಸಿ ವಿವರಗಳನ್ನು ಹಂಚಿಕೊಳ್ಳುವ ನಿರೀಕ್ಷೆಯಿದೆ.

Leave a comment

Leave a Reply

Your email address will not be published. Required fields are marked *

Related Articles

ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಕೊಲಂಬೊದಲ್ಲಿ  ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ

2026ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಕೊಲಂಬೊದಲ್ಲಿ ನಡೆಯುವ ನಿರ್ಣಾಯಕ ಪಂದ್ಯಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು,...

ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿರುವ ಪಾಕಿಸ್ತಾನಕ್ಕೆ ಐಸಿಸಿ ಎಚ್ಚರಿಕೆ ಬಾಲ ಮುದುರಿಕೊಂಡ ಪಾಕಿಸ್ತಾನ

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿರುವ ಮಾತುಗಳನ್ನಾಡುತ್ತಿದ್ದ ಪಾಕಿಸ್ತಾನದ ಬಾಲ ಮುದುರಿಕೊಂಡಂತೆ...

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಿಕ ಪಂದ್ಯದಲ್ಲೇ ಭಾರತ ತಂಡಕ್ಕೆ ಭರ್ಜರಿ ಜಯದೊಂದಿಗೆ  ಟೂರ್ನಿಯಲ್ಲಿ ಶುಭಾರಂಭ

“ಮುಂಬೈ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಆರಂಭಿಕ ಪಂದ್ಯದಲ್ಲೇ ಭಾರತ ತಂಡ ಭರ್ಜರಿ ಜಯ ಸಾಧಿಸುವ...

6ನೇ ಬಾರಿಗೆಅಂಡರ್ 19 ವರ್ಲ್ಡ್ ಕಪ್ ಗೆದ್ದ ಭಾರತೀಯ ಯುವ ತಂಡ

ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ದಾಖಲೆಯ...