ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಸ್ಥಳದಲ್ಲಿ ಪುರಾತನ ಕಾಲದ ಶಿವಲಿಂಗ ಪತ್ತೆ

18

“ಗದಗದ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಮುಂದುವರಿದಿದ್ದು, ಉತ್ಖನನ ಸ್ಥಳ ಪಕ್ಕದ ಗೋಡೆಯಲ್ಲಿ ಪುರಾತನ ಕಾಲದ ಶಿವಲಿಂಗವೊಂದು ಪತ್ತೆಯಾಗಿದೆ.
ನಿಧಿ ಶೋಧದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಜಾಗಕ್ಕೆ ಸಮೀಪದಲ್ಲಿಯೇ ಈ ಲಿಂಗ ಕಂಡುಬಂದಿದೆ. ಸಂಪೂರ್ಣವಾಗಿ ಡೆಮಾಲಿಶ್ ಮಾಡಿದ ಶಾಲೆಯ ಗೋಡೆಯ ಭಾಗದಲ್ಲಿ ಗ್ರಾಮಸ್ಥರ ಕಣ್ಣಿಗೆ ಈ ಶಿವಲಿಂಗ ಮೊದಲು ಬಿದ್ದಿದೆ.
ಈ ಲಿಂಗವು ಬಹಳ ಹಳೆಯ ಕಾಲದ್ದಾಗಿರಬಹುದು ಎಂದು ಸ್ಥಳೀಯರು ಊಹಿಸಿದ್ದಾರೆ. ಪುರಾತತ್ವ ಇಲಾಖೆಯು ಈ ಲಿಂಗದ ಕುರಿತು ಪರಿಶೀಲನೆ ನಡೆಸುತ್ತಿದ್ದು, ಇದು ಯಾವ ಕಾಲಮಾನಕ್ಕೆ ಸೇರಿದ್ದು ಎಂಬ ಬಗ್ಗೆ ಸ್ಪಷ್ಟಪಡಿಸಬೇಕಿದೆ. ಮೊದಲು ಈ ಪ್ರದೇಶ ಸಪ್ತ ಗ್ರಾಮಗಳ ಅಗ್ರಹಾರವಾಗಿತ್ತು.
ಈ ಅಗ್ರಹಾರ ಸೊಕಮನಕಟ್ಟಿ, ತಂಗಾಬೆಂಚಿ, ಜವಳಬೆಂಚಿ, ನರಸಿಪುರ, ಮೊಟಬಸಪ್ಪ, ಬೂದಿಬಸಪ್ಪ, ಲಕ್ಕುಂಡಿ ಗ್ರಾಮಗಳನ್ನು ಒಳಗೊಂಡಿತ್ತು.
ವಿಜಯನಗರ ಅರಸರ ಆಳಿಕ್ವೆ ಅಧಿಪತ್ಯದ ನಂತರ ಏಳು ಗ್ರಾಮದ ಜನರು ಲಕ್ಕುಂಡಿಗೆ ಬಂದು ನೆಲೆಸಿದರು. ಇಲ್ಲಿ ನಾಣ್ಯಗಳನ್ನು ತಯಾರಿಸುವ ಟಂಕಸಾಲೆಗಳಿದ್ದವು ಎಂಬ ಇತಿಹಾಸವಿದೆ

Leave a comment

Leave a Reply

Your email address will not be published. Required fields are marked *

Related Articles

ಕಳಪೆ ರಸಗೊಬ್ಬರ ವಿತರಣೆ ಕರ್ನಾಟಕದಲ್ಲಿ ಐದು ಎಫ್ಐಆರ್ ದಾಖಲು ಮಾಹಿತಿ ನೀಡಿದ ಕೇಂದ್ರ ಸರಕಾರ

ಬೆಂಗಳೂರು: ನಕಲಿ, ಕಳಪೆ ಗುಣಮಟ್ಟದ ಉತ್ಪನ್ನಗಳ ಮಾರಾಟದ ಐದು ಎಫ್‌ಐಆರ್‌ಗಳು ದಾಖಲಾಗಿದ್ದರೂ ಕರ್ನಾಟಕದಲ್ಲಿ ರಸಗೊಬ್ಬರ ಪೂರೈಕೆಯಲ್ಲಿ...