25 ಲಕ್ಷ ಲಂಚ ಪ್ರಕರಣ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು

43

“ಬೆಂಗಳೂರು: ಅಬಕಾರಿ ಡಿಸಿಯೊಬ್ಬರು 25 ಲಕ್ಷ ರೂ. ಲಂಚ ಪಡೆದ ಪ್ರಕರಣದಲ್ಲಿ ಅಬಕಾರಿ ಸಚಿವರೂ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸಚಿವ ಆರ್ ಬಿ ತಿಮ್ಮಾಪುರ ಅವರ ವಿರುದ್ಧ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಇತ್ತೀಚೆಗೆ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಅವರು ಬಾರ್ ಲೈಸೆನ್ಸ್ ನೀಡಲು 25 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದದ್ದರು.
ಜಗದೀಶ್ ಸೇರಿದಂತೆ ಐವರು ಅಬಕಾರಿ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಸೋರಿಕೆಯಾದ ಆಡಿಯೋ ಕ್ಲಿಪ್‌ನಲ್ಲಿ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಅವರು, ಅಬಕಾರಿ ಸಚಿವರ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ದೂರುದಾರ ಲಕ್ಷ್ಮಿನಾರಾಯಣ ಅವರು ಆರೋಪಿಸಿದ್ದಾರೆ.
ಬಹಿರಂಗವಾಗಿರುವ ಆಡಿಯೋ ಕ್ಲಿಪ್‌ನಲ್ಲಿ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಅವರು ಸಚಿವರ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿ ಅಬಕಾರಿ ಸಚಿವರ ವಿರುದ್ಧ ಲಕ್ಷ್ಮಿನಾರಾಯಣ ದೂರು ನೀಡಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಲಕ್ಷ್ಮಿನಾರಾಯಣ ಅವರು ಇಂದು ಲೋಕಾಯುಕ್ತ ಕಚೇರಿಗೆ ಆಗಮಿಸಿ ಸಚಿವ ತಿಮಾಪುರ ಹಾಗೂ ಪುತ್ರ, ಜಿಲ್ಲಾಧಿಕಾರಿ ಜಗದೀಶ್‌ ನಾಯಕ್‌ ಅವರ ಪಾತ್ರದ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಜಗದೀಶ್‌ ನಾಯಕ್‌ ಹಾಗೂ ಎಸ್‌‍ಪಿ ತಮಣ ಮತ್ತು ಕಾನ್‌ಸ್ಟೇಬಲ್‌ ಲಕ್ಕಪ್ಪ ಅವರುಗಳು ನಡೆಸಿರುವ ಆಡಿಯೋ ಸಂಭಾಷಣೆಯಲ್ಲಿ ಸಚಿವರು ಮತ್ತು ಅವರ ಪುತ್ರ ಲಂಚಕ್ಕೆ ಬೇಡಿಕೆ ಇಟ್ಟಿರುವುದನ್ನು ಸಾಕ್ಷಿಯಾಗಿ ಪರಿಗಣಿಸಬೇಕೆಂದು ಲಕ್ಷ್ಮಿನಾರಾಯಣ ಮನವಿ ಮಾಡಿದ್ದಾರೆ.
ಲಕ್ಷ್ಮಿನಾರಾಯಣ ಅವರು ಸಿಎಲ್-7 ಪರವಾನಗಿ ಮತ್ತು ಮೈಕ್ರೋ ಬ್ರೂವರಿ ಪರವಾನಗಿಗಾಗಿ ಅರ್ಜಿ ಸಲ್ಲಿಸಿದ್ದರು. ಇದಕ್ಕಾಗಿ ನಾಯಕ್ ಮತ್ತು ಇತರ ಇಬ್ಬರು ಆರೋಪಿಗಳು 80 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಮೂವರು ಅಬಕಾರಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ,...

ರಾಜ್ಯಾದ್ಯಂತ ಹೋಮ್ ಸ್ಟೇ ನೋಂದಣಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ; 500 ಹೋಮ್‌ಸ್ಟೇ ಮಾಲೀಕರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್‌ಸ್ಟೇಗಳ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಲ್ಲಿಯವರೆಗೆ 500ಕ್ಕೂ ಹೆಚ್ಚು ಹೋಮ್‌ಸ್ಟೇ...

ಬಿಡದಿ ಟೌನ್‌ಶಿಪ್‌ : ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು: ಬಿಡದಿ ಟೌನ್ ಶಿಪ್ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ...

ಹೊಸಮುಖಗಳಿಗೆ ಆದ್ಯತೆ ನೂತನ ಸಚಿವರ ಪರಿಷ್ಕೃತ ಪಟ್ಟಿ ಹೈಕಮಾಂಡ್ ಬಳಿ; ಸಿಎಂ-ಮಾಜಿ ಸಿಎಂ ಬೆಂಗಳೂರಿಗೆ ವಾಪಸ್

ದೆಹಲಿದಲ್ಲಿ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ...