ಶಿವಸೇನೆಯಿಂದ ಮೇಯರ್ ಆದ್ರೆ ಬಾಳಾ ಠಾಕ್ರೆ ಅವರ ಜನ್ಮ ಶತಮಾನೋತ್ಸವ ವರ್ಷದಲ್ಲಿ ಅವರಿಗೆ ನೀಡುವ ಗೌರವ :: ಏಕನಾಥ್ ಶಿಂಧೆ

54
ಇತ್ತೀಚಿಗೆ ನಡೆದ ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮಹಾಯುತಿಯಲ್ಲಿ ಈಗ ಮೇಯರ್ ಪಟ್ಟಕ್ಕಾಗಿ ಫೈಟ್ ಆರಂಭವಾಗಿದೆ.


ಶಿವಸೇನೆಯಿಂದ ಮೇಯರ್ ಆದ್ರೆ ಬಾಳಾ ಠಾಕ್ರೆ ಅವರ ಜನ್ಮ ಶತಮಾನೋತ್ಸವ ವರ್ಷದಲ್ಲಿ ಅವರಿಗೆ ನೀಡುವ ಗೌರವ ಎಂದು ಶಿವಸೈನಿಕರ ಒಂದು ವರ್ಗ ನಂಬುತ್ತದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಸೋಮವಾರ ಹೇಳಿದ್ದಾರೆ. ಮೇಯರ್ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಶಿವಸೇನೆ ಮಿತ್ರಪಕ್ಷ ಭಾರತೀಯ ಜನತಾ ಪಕ್ಷದೊಂದಿಗೆ ವಾಗ್ವಾದ ನಡೆಸುತ್ತಿದೆ ಎಂಬ ವರದಿಗಳ ನಡುವೆಯೇ ಶಿಂಧೆ ಅವರು ಈ ಹೇಳಿಕೆ ನೀಡಿದ್ದಾರೆ
ಕಳೆದ ವಾರ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಹೊಸ ರಾಜಕೀಯ ಸಮೀಕರಣಗಳ ವರದಿಗಳನ್ನು ತಳ್ಳಿಹಾಕಿದ ಶಿಂಧೆ, ಮುಂಬೈನಲ್ಲಿ ಮಹಾಯುತಿ ಮೇಯರ್ ಇರುತ್ತಾರೆ ಎಂದು ಒತ್ತಿ ಹೇಳಿದರು.

ಅದೇ ರೀತಿ, ಶಿವಸೇನೆ ಮತ್ತು ಬಿಜೆಪಿ ಒಟ್ಟಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಹಾನಗರ ಪಾಲಿಕೆಗಳಲ್ಲಿ ಮಹಾಯುತಿ ಮೈತ್ರಿಕೂಟದ ಮೇಯರ್‌ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. “ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ಶತಮಾನೋತ್ಸವ ವರ್ಷವು ಜನವರಿ 23 ರಿಂದ ಪ್ರಾರಂಭವಾಗುತ್ತದೆ.
ಕೆಲವು ಶಿವಸೈನಿಕರು(ಪಕ್ಷದ ಕಾರ್ಯಕರ್ತರು) ಬಿಎಂಸಿಯಲ್ಲಿ ಶಿವಸೇನಾ ಮೇಯರ್ ಅನ್ನು ಸ್ಥಾಪಿಸಬೇಕು ಎಂಬ ಭಾವನೆ ಹೊಂದಿದ್ದಾರೆ” ಎಂದು ಅವರು ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಏಕನಾಥ್ ಶಿಂಧೆ ಅವರು ಪರೋಕ್ಷವಾಗಿ ಮುಂಬೈ ಮೇಯರ್ ಹುದ್ದೆಗೆ ಹಕ್ಕು ಮಂಡಿಸುತ್ತಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕ ಹೈಕೋರ್ಟ್ ನಲ್ಲಿ 101 ಹುದ್ದೆಗಳ ಭರ್ತಿಗೆ ಕ್ರಮ ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಲ್ಲಿ 101 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ....

ಶಬರಿಮಲೆ ಅಯ್ಯಪ್ಪ ಬ್ರಹ್ಮಚಾರಿ; ಅಗತ್ಯ ಧಾರ್ಮಿಕ ನಿರ್ಬಂಧ ಎತ್ತಿ ಹಿಡಿಯಬಹುದು: ಸುಪ್ರೀಂ ಕೋರ್ಟ್ ನಲ್ಲಿ ದೇವಾಲಯದ ಪರ ವಕೀಲರ ವಾದ

“ನವದೆಹಲಿ: ಸುಪ್ರೀಂ ಕೋರ್ಟ್ ಮಂಗಳವಾರ ಶಬರಿಮಲೆ ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕರನ್ನು, ಜನ್ಮ ಅಥವಾ ಸ್ಥಾನಮಾನದ...

ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಂಕ 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಸಚಿವ ಮಧು ಬಂಗಾರಪ್ಪ

“ಬೆಂಗಳೂರು: SSLC ಪರೀಕ್ಷೆಯ ಅಂಕಗಳನ್ನು 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಮಾಡಲಾಗಿದೆ. ಹಿಂದಿ ಸೇರಿ...

ವೈಕುಂಠ ಏಕಾದಶಿ ಸಂಭ್ರಮ: ತಿಮ್ಮಪ್ಪನ ದರ್ಶನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ

ಬೆಂಗಳೂರು: ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ನಗರದ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ...