ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಆಗಮನ ಮುಂಚೆ ಕುಸಿದು ಬಿದ್ದಬೃಹತ್ ಕಟೌಟ್‌ಗಳು ನಾಲ್ವರಿಗೆ ಗಾಯ

36

ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಶನಿವಾರ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿಬಿದ್ದಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಒಟ್ಟು 42,345 ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸಚಿವರು ಆಗಮಿಸುವುದಕ್ಕೂ ಮುನ್ನವೇ ಈ ಅವಘಡ ಸಂಭವಿಸಿದೆ.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಇಂದು ಬೆಳಗ್ಗೆ ಈ ಕಟೌಟ್ ಗಳು ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.

ಕಟೌಟ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ, ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಅವು ಕುಸಿದು ಬಿದ್ದಿವೆ. ಈ ಅವಘಡದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ದೊಡ್ಡ ಅವಘಡ ಸಂಭವಿಸಿಲ್ಲ. ಕುಸಿದುಬಿದ್ದ ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...