ಸರಕಾರಿ ಅಧಿಕಾರಿಗಳು ಶಾಸಕರು ಸಾರ್ವಜನಿಕರ ದೂರವಾಣಿ ಕರೆಗೆ ಸ್ಪಂದಿಸುವುದು ಅಗತ್ಯ ಸುತ್ತೋಲೆ ಹೊರಡಿಸಿದ ರಾಜ್ಯ ಸರಕಾರ

44

ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆ ರಿಸೀವ್ ಮಾಡಲೇಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. ಹೌದು.. ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಶಾಸಕರು, ಪರಿಷತ್ ಸದಸ್ಯರ, ಸಂಸದರ ಫೋನ್ ಕರೆ ಸ್ವೀಕರಿಸುವ ಸಂಬಂಧ ಸರ್ಕಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸರ್ಕಾರಿ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವುದು, ಮರಳಿ ಕರೆ ಮಾಡದೇ ಇರುವ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಈ ವಿಚಾರವಾಗಿ ಸುತ್ತೋಲೆ ಹೊರಡಿಸಿರುವ ಅವರು, ಇನ್ನು ಮುಂದೆ ಎಲ್ಲ ಸರ್ಕಾರಿ ಅಧಿಕಾರಿಗಳು ಎಂಎಲ್ಎಗಳ ತ್ತು ಎಂಎಲ್‌ಸಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಲೇಬೇಕು.
ಒಂದು ವೇಳೆ ಕರೆ ಬಂದಾಗ ಇತರ ಕೆಲಸಗಳಲ್ಲಿ ವ್ಯಸ್ತರಾಗಿದ್ದಲ್ಲಿ, ಮರಳಿ ಕರೆ ಮಾಡಿ ಮಾತನಾಡಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆ ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ವಿಧಾನಸಭಾ ಹಾಗೂ ಪರಿಷತ್ತಿನ ಸದಸ್ಯರಿಗೆ ವಿನಂತಿಸಿಕೊಂಡಾಗ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಬೇಕಾಗುತ್ತದೆ.

ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ.

ಈ ಹಿನ್ನೆಲೆಯಲ್ಲಿ ಇನ್ಮುಂದೆ ಎಲ್ಲ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ, ಪರಿಷತ್ತಿನ ಸದಸ್ಯರು, ಸಂಸದರ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು ಎಂದು ಸೂಚಿಸಲಾಗಿದೆ.


ಅವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವುದು, ಒಂದು ವೇಳೆ ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಕರ್ತವ್ಯ ಮುಗಿದ ನಂತರ ಮರು ಕರೆಯನ್ನು ಮಾಡಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸುತ್ತೋಲೆ ಹೊರಡಿಸಿದ್ದಾರೆ.


Leave a comment

Leave a Reply

Your email address will not be published. Required fields are marked *

Related Articles

ವರ್ಷಾಂತ್ಯದಲ್ಲಿ ಗ್ರಾಮ ಪಂಚಾಯತ್ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ ::ಸಚಿವ ಪ್ರಿಯಾಂಕ ಖರ್ಗೆ

ಕಲಬುರಗಿ: ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ...

ಮೂರು ವರ್ಷಗಳ ಬಳಿಕ ಇಂದು ಶೃಂಗೇರಿ ನೂತನ ಶಾಸಕರಾಗಿ ಡಿ ಎನ್ ಜೀವರಾಜ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕೊನೆಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಇಂದು ಡಿ ಎನ್ ಜೀವರಾಜ್ ಪ್ರಮಾಣ ವಚನ...

ಶೃಂಗೇರಿ ಮರುಮತ ಎಣಿಕೆ ಪ್ರಕರಣ ಅಂಚೆ ಮತಗಳಲ್ಲಿ ಅಕ್ರಮ ಆರೋಪ ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ  ಎಫ್ಐಆರ್ ದಾಖಲು

“ಚಿಕ್ಕಮಗಳೂರು ಶೃಂಗೇರಿ ಮತ ಎಣಿಕೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಅಂಚೆ ಮತಗಳಲ್ಲಿ ಅಕ್ರಮ ಆರೋಪದ...

52 ಮತಗಳಿಂದ ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು, ನೂತನ ಶಾಸಕರಾಗಿ ಘೋಷಣೆ..

ಬೆಂಗಳೂರು: ಹೈಕೋರ್ಟ್‌ ಆದೇಶದಂತೆ ನಡೆದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ, ಕಾಂಗ್ರೆಸ್ ಶಾಸಕ...