ಚುನಾವಣೆಗೂ ಮುನ್ನ ಮತದಾರರ ಪಟ್ಟಿಯನ್ನು ಖುದ್ದು ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ ಮಹೇಶ್ವರ ರಾವ್ ಸೂಚನೆ

35

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯನ್ನು ಖುದ್ದು ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ ಮಹೇಶ್ವರ ರಾವ್ ಅವರು ಶನಿವಾರ ಸೂಚನೆ ನೀಡಿದ್ದಾರೆ.
ಟೌನ್ ಹಾಲ್‌ನಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದಂತೆ ಜನವರಿ 22 ರಂದು ರಾಜ್ಯ ಚುನಾವಣಾ ಆಯೋಗ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಿದೆ.
ಅದರಂತೆ, ಎಲ್ಲಾ ಐದು ಪಾಲಿಕೆಗಳ ಅಧಿಕಾರಿಗಳಿಗೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು. ಆಯಾ ಪಾಲಿಕೆ ಅಧಿಕಾರಿಗಳು ವಾರ್ಡ್ ಗಳಿಗೆ ಖುದ್ದಾಗಿ ಪರಿಶೀಲಿಸಬೇಕು. ಗೊಂದಲವನ್ನು ತಪ್ಪಿಸಬೇಕು ಎಂದು ಸೂಚನೆ ನೀಡಿದರು.
ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ಸಂಗ್ರಹದ ಜೊತೆಗೆ ಚುನಾವಣಾ ಕೆಲಸಕ್ಕೆ ಆದ್ಯತೆ ನೀಡಬೇಕು. ಯಾವುದೇ ಲೋಪದೋಷಗಳಿಲ್ಲದೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ತಿಳಿಸಿದರು,

ಮತದಾರರ ಪಟ್ಟಿ ಪರಿಷ್ಕರಣೆಯ ಸಮಯದಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಪ್ರತಿ ಮನೆಗೆ ಭೇಟಿ ನೀಡುವುದನ್ನು ಮತ್ತು ಸೇರ್ಪಡೆ, ತಿದ್ದುಪಡಿ ಪ್ರಕ್ರಿಯೆಯನ್ನು ನಡೆಸುವಾಗ ಸಂಬಂಧಿತ ದಾಖಲೆಗಳಿರುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...