ಹಿಂದೂ ಯುವಕನ ಮನೆಗೆ ಬೆಂಕಿ ಹಚ್ಚಿದ ಮುಸ್ಲಿಂ ಯುವಕನನ್ನು ತಕ್ಷಣ  ಬಂಧಿಸಿದ ಪೊಲೀಸರು ತಪ್ಪಿದ ಅನಾಹುತ

29

“ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಹಿಂದೂ ವ್ಯಕ್ತಿಯೊಬ್ಬರ ಮನೆಗೆ ಬೆಂಕಿ ಹಚ್ಚಿದ 18 ವರ್ಷದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿನ ಜಾತ್ರೆಗೆಂದು ದಿನಕರ್ ಕುಟುಂಬ ಸಮೇತರಾಗಿ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

18 ವರ್ಷದ ಫೈಸಾನ್ ಜಾಫರ್ ಶೇಖ್ ಎಂಬ ಯುವಕ ವೈಯಕ್ತಿಕ ದ್ವೇಷದಿಂದ ದಿನಕರ್ ಅವರ ಮನೆಗೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ. ಬೆಂಕಿ ಹಚ್ಚಿದ ತಕ್ಷಣವೇ ಸ್ಥಳೀಯರ ಸಮಯಪ್ರಜ್ಞೆಯಿಂದ ಆರೋಪಿಯನ್ನು ಹಿಡಿದುಕೊಳ್ಳಲಾಗಿದ್ದು, ಹೆಚ್ಚಿನ ಅನಾಹುತ ತಪ್ಪಿದೆ.

  ಘಟನೆಯಿಂದ ದೇವರ ಹಕ್ಕಲ ಪ್ರದೇಶದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಾಂತಿ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಘಟನೆಯ ಹಿಂದಿನ ಉದ್ದೇಶವನ್ನು ತಿಳಿಯಲು ತನಿಖೆ ನಡೆಯುತ್ತಿದ್ದು, ಆರೋಪಿಯನ್ನು ಇನ್ನೂ ಬಂಧಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...