ಕೆ ಎಸ್ ಆರ್ ಟಿಸಿ ಬಸ್ಸುಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತು ತೆರವಿಗೆ ಆದೇಶ

36

“ಬೆಂಗಳೂರು: ಸಾರ್ವಜನಿಕರಿಂದ ತೀವ್ರ ಟೀಕೆಯ ನಂತರ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ನಿಲ್ದಾಣಗಳಲ್ಲಿ ಮತ್ತು ಬಸ್ ಗಳ ಮೇಲೆ ತಂಬಾಕು ಉತ್ಪನ್ನಗಳ ಸೇವನೆ ಉತ್ತೇಜಿಸುವ ಎಲ್ಲಾ ನೇರ ಮತ್ತು ಪರೋಕ್ಷ ಜಾಹೀರಾತುಗಳನ್ನು ನಿಷೇಧಿಸಿದೆ. ಈ ಸಂಬಂಧ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶುಕ್ರವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ನಿಗಮ(ಬಿಎಂಟಿಸಿ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ(ಎನ್‌ಡಬ್ಲ್ಯೂಕೆಆರ್‌ಟಿಸಿ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ(ಕೆಕೆಆರ್‌ಟಿಸಿ)ದ ವ್ಯವಸ್ಥಾಪಕ ನಿರ್ದೇಶಕರಿಗೆ ನೀಡಿದ ಟಿಪ್ಪಣಿಯಲ್ಲಿ, ತಮ್ಮ ನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ತರಬೇಕು ಎಂದು ಆದೇಶಿಸಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯಿಂದ, ತಂಬಾಕು ಉತ್ಪನ್ನಗಳ ಸೇವನೆಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಉತ್ತೇಜಿಸುವ ಯಾವುದೇ ಜಾಹೀರಾತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಸ್ಸುಗಳಲ್ಲಿ ಅಥವಾ ಸಾರಿಗೆ ನಿಗಮಗಳ ಬಸ್ ನಿಲ್ದಾಣಗಳಲ್ಲಿ ಪ್ರದರ್ಶಿಸಬಾರದು ಎಂದು ನಾನು ಈ ಮೂಲಕ ನಿರ್ದೇಶಿಸುತ್ತೇನೆ” ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಅಂತಹ ಜಾಹೀರಾತುಗಳನ್ನು ಈಗಾಗಲೇ ಬಸ್ಸುಗಳಲ್ಲಿ ಅಥವಾ ಬಸ್ ನಿಲ್ದಾಣಗಳಲ್ಲಿ ಪ್ರದರ್ಶಿಸಿದ್ದರೆ, ಅವುಗಳನ್ನು ತೆಗೆದುಹಾಕಲು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...