ಶನಿಮಹಾತ್ಮ ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿರುವುದಕ್ಕೆ ಮುಸ್ಲಿಂ ಯವಕನಿಂದ ಗಲಾಟೆ,

37

ದೊಡ್ಡಬಳ್ಳಾಪುರ: ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಯುವಕನೋರ್ವ ಹಿಂದೂಗಳ ಮೇಲೆ ಗಲಾಟೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.





ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿರುವ ಶನಿಮಹಾತ್ಮ ದೇವಸ್ಥಾನದಲ್ಲಿ ಬೆಳಗ್ಗೆ ಸುಪ್ರಭಾತ ಹಾಡು ಹಾಕಲಾಗಿತ್ತು.


ಇದಕ್ಕೆ ಮುಸ್ಲಿಂ ಯುವಕನೋರ್ವ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮನೆಯಲ್ಲಿ ತಾಯಿ ಮಲಗಿದ್ದಾಳೆ ಸೌಂಡ್ ಕಡಿಮೆ ಮಾಡಿ, ಇಲ್ಲವೆ ಆಫ್ ಮಾಡಿ ಎಂದು ಧಮ್ಕಿ ಹಾಕಿದ್ದಾನೆ. ಇದಕ್ಕೆ ಆಕ್ರೋಶಗೊಂಡು ಹಿಂದೂಗಳು ಮಸೀದಿಯಲ್ಲಿ ಅಜಾನ್ ಕೂಗಿದರೆ ನಾವು ಹೀಗೆ ಕೇಳುತ್ತೀವಾ ಎಂದು ಪ್ರಶ್ನಿಸಿದರು.



ಇದೇ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ ಯುವಕರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ನಂತರ ದೇವಸ್ಥಾನದ ಪೂಜಾರಿ ನೀಡಿದ ದೂರಿನನ್ವಯ ದೊಡ್ಡಬಳ್ಳಾಪುರ ನಗರ ಪೊಲೀಸರು NCR ದಾಖಲಿಸಿದ್ದು ಎರಡು ಕಡೆಯವರಿಗೆ ಬುದ್ದಿ ಹೇಳಿ ಕಳುಹಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...