ಗ್ರಾಮ ಪಂಚಾಯಿತ್ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ- ಪ್ರಿಯಾಂಕ್ ಖರ್ಗೆ

34

ಬೆಂಗಳೂರು: ಇದೇ ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆ ಗೆ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.


ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ್ ಅವರು ರಾಜ್ಯ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅವಧಿಯು ಮುಕ್ತಾಯಗೊಳ್ಳುತ್ತಿರುವುದರಿಂದ ಮುಂದಿನ ಚುನಾವಣೆ ನಡೆಸುವವರೆಗೂ ಆಡಳಿತಾಧಿಕಾರಿಯನ್ನು ನೇಮಿಸುವ ಬದಲು ಈಗಿರುವ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಬೇಕೆಂದು ತಿಳಿಸಿದರು.
ಇದಕ್ಕೆ ಉತ್ತರಿಸಿದ ಸಚಿವರು, ಚುನಾವಣೆ ನಡೆಸುವುದು ತುಂಬಾ ತಡವಾಗುವುದಾದರೆ ಮಾತ್ರ ಕಾನೂನಿನಡಿ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಲು ಅವಕಾಶವಿರುತ್ತದೆ ಎಂದರು.
  ಕೃತಕ ಬುದ್ಧಿಮತ್ತೆ, ಸಾಮಾಜಿಕ ಮಾಧ್ಯಮ ಜವಾಬ್ದಾರಿಯುತ ಬಳಕೆಗೆ ಕ್ರಮಗಳ ಕುರಿತು ಸಮಾಲೋಚನೆ: ಸಚಿವ ಪ್ರಿಯಾಂಕ್ ಖರ್ಗೆ ಆದರೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ. ಚುನಾವಣೆಯನ್ನು ಸರ್ಕಾರ ಆದಷ್ಟು ಬೇಗ ನಡೆಸಲಿದೆ. ಆದಾಗ್ಯೂ ಚುನಾವಣೆ ನಡೆಸುವುದು ತಡವಾದಲ್ಲಿ ಸದಸ್ಯರ ಮನವಿ ಕುರಿತು ಕಾನೂನಿನಡಿ ಪರಿಶೀಲಿಸಲಾಗುವುದು ಎಂದರು

Leave a comment

Leave a Reply

Your email address will not be published. Required fields are marked *

Related Articles

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...

ಜೂನ್ 27 ರಂದು ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ :: ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಜೂನ್ 27 ರಂದು...