ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

24

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಚ್ಚದಂತೆ ಕ್ರಮ ಕೈಗೊಳ್ಳುವಂತೆ ಹೋರಾಟ ನಡೆಸುತ್ತಿರುವ ತುಳುನಾಡ ರಕ್ಷಣಾ ವೇದಿಕೆಯ ಕಾರ್ಯ ಶ್ಲಾಘನೀಯವಾಗಿದ್ದು, ಇದು ಕನ್ನಡ ಭಾಷೆ ಮತ್ತು ಕನ್ನಡ ಶಿಕ್ಷಣವನ್ನು ಉಳಿಸಿ ಬೆಳೆಸುವ ದಿಕ್ಕಿನಲ್ಲಿ ಕೈಗೊಂಡಿರುವ ಮಹತ್ವದ ಹೋರಾಟವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಅವರು ಹೇಳಿದರು.

ಕನ್ನಡ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ, ಮಕ್ಕಳ ಭವಿಷ್ಯ ಹಾಗೂ ಕನ್ನಡ ಭಾಷೆಯ ಅಸ್ತಿತ್ವಕ್ಕಾಗಿ ಧ್ವನಿ ಎತ್ತಿರುವ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಸಮಾಜಕ್ಕೆ ದಿಕ್ಕು ತೋರಿಸುವಂತಿದೆ. ಶಿಕ್ಷಣವೇ ಭಾಷೆಯ ಜೀವಾಳವಾಗಿದ್ದು, ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ದೊರಕಬೇಕೆಂಬ ಉದ್ದೇಶದಿಂದ ಈ ಹೋರಾಟ ನಡೆಸುತ್ತಿರುವುದು ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು.

ಕನ್ನಡವನ್ನು ಉಳಿಸಿ ಬೆಳೆಸುವ ಈ ಹೋರಾಟದಲ್ಲಿ ಕನ್ನಡ ಹಾಗೂ ತುಳು ಸಂಘಟನೆಗಳು ಒಂದೇ ಮನೋಭಾವದೊಂದಿಗೆ ಕೈಜೋಡಿಸುವುದು ಅತ್ಯಂತ ಅಗತ್ಯವಾಗಿದ್ದು, ಇಂತಹ ಹೋರಾಟಗಳು ಭಾಷಾ ಸಂಘಟನೆಗಳ ನಡುವೆ ಪ್ರೀತಿ–ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ಕೆಲಸ ಮಾಡುತ್ತದೆ. ಭಾಷೆ, ಸಂಸ್ಕೃತಿ ಹಾಗೂ ಶಿಕ್ಷಣದ ರಕ್ಷಣೆಗೆ ಸಂಘಟನೆಗಳ ಒಗ್ಗಟ್ಟು ಅವಶ್ಯಕವೆಂದು ಸುಜಯ್ ಪೂಜಾರಿ ಅವರು ಹೇಳಿದರು.

ತುಳುನಾಡ ರಕ್ಷಣಾ ವೇದಿಕೆಯ ಈ ನಿಲುವಿಗೆ ಕರ್ನಾಟಕ ರಕ್ಷಣಾ ವೇದಿಕೆ ಸಂಪೂರ್ಣ ಬೆಂಬಲ ನೀಡುವುದರ ಜೊತೆಗೆ, ಕನ್ನಡ ಶಾಲೆಗಳ ಉಳಿವಿಗಾಗಿ ಮುಂದಿನ ದಿನಗಳಲ್ಲಿ ಸಂಯುಕ್ತ ಹೋರಾಟಕ್ಕೆ ಸಿದ್ಧವಿರುವುದಾಗಿ ಅವರು ತಿಳಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...