ಮಣಿಪುರ ಬಿಜೆಪಿ ನೂತನ ಸರಕಾರ ರಚನೆಗೆ ಸಿದ್ಧತೆ ಶಾಸಕಾಂಗ ಪಕ್ಷದ ನಾಯಕಮುಖ್ಯ ಮಂತ್ರಿಯಾಗಿ ವೈ ಖೇಮ್ ಚಂದ್ ಸಿಂಗ್ ಆಯ್ಕೆ

45
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮಹತ್ವದ ಬೆಳವಣಿಗೆಯಲ್ಲಿ ಒಂದು ವರ್ಷದ ರಾಷ್ಟ್ರಪತಿ ಆಡಳಿತ ಅಂತ್ಯವಾಗಿದ್ದು, ಮತ್ತೆ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದೆ. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ವೈ ಖೇಮ್‌ಚಂದ್ ಸಿಂಗ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ.


ಸಭೆಯಲ್ಲಿ ಮಾಜಿ ಸಿಎಂ ಬಿರೇನ್ ಸಿಂಗ್, ಬಿಜೆಪಿ ಶಾಸಕರು, ಪಕ್ಷದ ಕೇಂದ್ರ ವೀಕ್ಷಕ ತರುಣ್ ಚುಗ್ ಮತ್ತು ಬಿಜೆಪಿ ಈಶಾನ್ಯ ಉಸ್ತುವಾರಿ ಸಂಬಿತ್ ಪಾತ್ರ ಸೇರಿದಂತೆ ಇತರರು ಭಾಗವಹಿಸಿದ್ದರು. ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಯುಮ್ನಾಮ್ ಖೇಮ್‌ಚಂದ್ ಸಿಂಗ್ ಅವರು ಮಣಿಪುರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಸುಮಾರು ಒಂದು ವರ್ಷದಿಂದ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತ ಹಿಂಪಡೆಯುವ ಪ್ರಕ್ರಿಯೆ ಆರಂಭವಾಗಿದೆ.

ಇಂದು ರಾತ್ರಿ ಎನ್‌ಡಿಎ ಮಿತ್ರಪಕ್ಷಗಳ ಶಾಸಕರ ಸಭೆ ನಡೆಯಲಿದ್ದು, ಅಲ್ಲಿ ಸಿಂಗ್ ಅವರನ್ನು ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅನುಮೋದಿಸುವ ನಿರೀಕ್ಷೆಯಿದೆ ಎಂದು ಪಿಟಿಐ ವರದಿ ಮಾಡಿದೆ. ಸಿಂಗ್‌ಜಮೇ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿಂಗ್ ಅವರು ಈ ಹಿಂದೆ, ಬಿರೇನ್ ಸಿಂಗ್ ಸರ್ಕಾರದ ಎರಡನೇ ಅವಧಿಯಲ್ಲಿ, ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಕಳೆದ ಮೇ 2023ರಿಂದ ಮಣಿಪುರದಲ್ಲಿ ಆರಂಭವಾದ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷವು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸಿತ್ತು.
ಈ ಹಿನ್ನೆಲೆಯಲ್ಲಿ ಉಂಟಾದ ರಾಜಕೀಯ ಅಸ್ಥಿರತೆಯಿಂದಾಗಿ, ಅಂದಿನ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರ ಪತನಗೊಂಡ ನಂತರ, ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿತ್ತು.

Leave a comment

Leave a Reply

Your email address will not be published. Required fields are marked *

Related Articles

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...

ವಿಭಜನೆಯತ್ತ ತೃಣಮೂಲ ಕಾಂಗ್ರೆಸ್  ಬಂಡಾಯ ಸಂಸದರ ಸಂಖ್ಯೆ 20ರ ಮ್ಯಾಜಿಕ್

“ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಅಂತರ್ಯುದ್ಧ ಈಗ ನಿಜವಾಗಿದೆ. ತೃಣಮೂಲ ಕಾಂಗ್ರೆಸ್  ಸ್ಥಾಪಕಿ ಮಮತಾ...