
ಬಳಿಕ ಸಿಸಿಟಿವಿ ದೃಶ್ಯಾವಳಿ ಮತ್ತು ಸ್ಥಳೀಯ ಮಾಹಿತಿ ಆಧಾರದ ಮೇಲೆ ಶಂಕಿತರನ್ನು ಗುರುತಿಸಿದೆ. ವಿಷಯ ಗಂಭೀರವಾಗಿದೆ ಎಂದು ಗುಪ್ತಚರ ಇಲಾಖೆ ಪರಿಗಣಿಸಿದ ಬಳಿಕ ನಂತರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಸಿಐಡಿ) ರಾಜೇಶ್ ಮೀನಾ ನೇತೃತ್ವದ ತಂಡವು ವಿಚಾರಣೆಗೆ ಒಳಪಡಿಸಿತು. ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಬಂದು ಷರತ್ತು ಉಲ್ಲಂಘಿಸಿ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ
ನಂತರ ಜಿಲ್ಲಾ ಪೊಲೀಸರ ನೆರವಿನೊಂದಿಗೆ ಸ್ಟಿಕ್ಕರ್‌ಗಳನ್ನು ತೆಗೆದುಹಾಕಲಾಯಿತು. ವಲಸೆ ಮತ್ತು ವಿದೇಶಿಯರ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗಿದ್ದು, ಇಬ್ಬರೂ ವಿದೇಶಿ ಪ್ರಜೆಗಳ ವೀಸಾಗಳನ್ನು ರದ್ದುಪಡಿಸಿ, ದೇಶ ತೊರೆಯುವಂತೆ ನೋಟಿಸ್ ನೀಡಲಾಗಿದೆ.
ಪ್ರವಾಸಿ ವೀಸಾದಲ್ಲಿ ದೇಶದಲ್ಲಿದ್ದಾಗ ಯಾವುದೇ ರೀತಿಯ ರಾಜಕೀಯ, ಪ್ರತಿಭಟನೆ ಅಥವಾ ಸೈದ್ಧಾಂತಿಕ ಚಟುವಟಿಕೆಗಳಿಗೆ ಅನುಮತಿಸಲಾಗುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Leave a comment