ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

26

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಬಸ್ ನಿಲ್ದಾಣದಲ್ಲಿ ಯುವತಿ ಹಾಗೂ ಆಕೆಯ ತಾಯಿ ಜೊತೆಯಲ್ಲಿದ್ದ ಹಿಂದೂ ವ್ಯಕ್ತಿ ವೆಂಕಟೇಶ್ ನನ್ನು ನೋಡಿದ ಮುಸ್ಲಿಂ ಯುವಕರ ಗುಂಪು ಕೆರಳಿದ್ದು, ಆತ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ತಪ್ಪಾಗಿ ತಿಳಿದು ವೆಂಕಟೇಶ್ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದೆ.

ಪೊಲೀಸ್ ದೂರಿನ ಪ್ರಕಾರ, ಬಸಪಟ್ಟಣ ಗ್ರಾಮದ ಅಜ್ಮೀರ್ ಮತ್ತು ಅಫಿಯಾ ನಡುವೆ ಜಗಳ ಆದ ನಂತರ ಅಫಿಯಾ ತನ್ನ ಮಕ್ಕಳೊಂದಿಗೆ ಮನೆ ಬಿಟ್ಟು ಹೋಗಿದ್ದರು. ಕುಟುಂಬದ ಸ್ನೇಹಿತ ಹಾಗೂ ನೆರೆ ಹೊರೆಯವರಾಗಿದ್ದ ವೆಂಕಟೇಶ್ ನನ್ನು ಅಫಿಯಾ ಜೊತೆಗೆ ಮಾತನಾಡಿ, ಆಕೆಯ ಮನವೊಲಿಸುವಂತೆ ಅಜ್ಮೀರ್ ಕೇಳಿಕೊಂಡಿದ್ದಾಗಿ ವರದಿಯಾಗಿದೆ. ಈ ಮನವಿ ಹಿನ್ನೆಲೆಯಲ್ಲಿ ವೆಂಕಟೇಶ್ ಬಸ್ ನಿಲ್ದಾಣದ ಹತ್ತಿರ ಹೋಗಿದ್ದಾನೆ. ಅಫಿಯಾ ಮತ್ತು ಆಕೆಯ ಮಕ್ಕಳು ತನ್ನ ತಾಯಿ ಮನೆಗೆ ಹೋಗಲು ಯೋಜಿಸಿದ್ದರು ಎನ್ನಲಾಗಿದೆ.

, ಮುಸ್ಲಿಂ ಪುರುಷರ ಗುಂಪು ಅಫಿಯಾ ಮತ್ತು ಆಕೆಯ ಮಕ್ಕಳೊಂದಿಗೆ ವೆಂಕಟೇಶ್ ಇರುವುದನ್ನು ನೋಡಿ, ತಪ್ಪಾಗಿ ತಿಳಿದುಕೊಂಡು ಆತನ ಮೇಲೆ ಹಲ್ಲೆ ನಡೆಸಿದೆ. ಸತ್ಯ ತಿಳಿದ ಸ್ಥಳೀಯರು ವೆಂಕಟೇಶ್ ಅದೇ ಗ್ರಾಮದವನಾಗಿದ್ದು ಯಾವುದೇ ದುರುದ್ದೇಶ ಹೊಂದಿರಲಿಲ್ಲ ಎಂದು ಹೇಳಿದರೂ ದಾಳಿಕೋರರು ಆತನನ್ನು ತೀವ್ರವಾಗಿ ಥಳಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಅಜ್ಮೀರ್, ಖಾಜಾಫೀರ್, ಇಂದ್ರಾವಲಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಜ್ಮೀರ್, ಅಫಿಯಾ, ಮಕ್ಕಳು ಮತ್ತು ವೆಂಕಟೇಶ್ ಪರಸ್ಪರ 15 ವರ್ಷಗಳಿಂದ ಪರಿಚಿತರಾಗಿದ್ದರು ಎಂದು ಪೊಲೀಸರು ದೃಢಪಡಿಸಿದ್ದಾರೆ.

ಪ್ರಕರಣ ದಾಖಲಾದ ಬೆನ್ನಲ್ಲೇ ವೆಂಕಟೇಶ್ ವಿರುದ್ಧವೂ ಪ್ರತಿದೂರು ದಾಖಲಿಸುವಂತೆ ಒತ್ತಾಯಿಸಿ ಮುಸ್ಲಿಂ ಸಮುದಾಯದ ಹಲವರು ಪೊಲೀಸ್ ಠಾಣೆಗೆ ಜಮಾಯಿಸಿ ಗಲಾಟೆ ನಡೆಸಿದರು. ಇದರಿಂದ ಪೊಲೀಸ್ ಠಾಣೆ ಹೊರಗೆ ಕಾವೇರಿದ ವಾತವಾರಣ ನಿರ್ಮಾಣವಾಗಿತ್ತು ಈ ಘಟನೆಯ ವಿಡಿಯೋಗಳು ವೈರಲ್ ಆಗಿದ್ದು, ನೀಲಿ ಟೀ ಶರ್ಟ್‌ನಲ್ಲಿದ್ದ ಒಬ್ಬ ವ್ಯಕ್ತಿ ಪೊಲೀಸರತ್ತ ಬೆದರಿಸುವ ರೀತಿಯಲ್ಲಿ ಬೆರಳನ್ನು ಅಲ್ಲಾಡಿಸುತ್ತಿರುವುದನ್ನು ತೋರಿಸಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಹಿಂದೂ ಯುವಕನ ಮನೆಗೆ ಬೆಂಕಿ ಹಚ್ಚಿದ ಮುಸ್ಲಿಂ ಯುವಕನನ್ನು ತಕ್ಷಣ  ಬಂಧಿಸಿದ ಪೊಲೀಸರು ತಪ್ಪಿದ ಅನಾಹುತ

“ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಹಿಂದೂ ವ್ಯಕ್ತಿಯೊಬ್ಬರ ಮನೆಗೆ...