ಸತತ ಎರಡನೇ ಬಾರಿ ಮಹಿಳಾ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು

16

“ವಡೋದರಾದಲ್ಲಿ ನಡೆದ ಡಬ್ಲ್ಯುಪಿಎಲ್ 2026 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ತಂಡದ ವಿರುದ್ಧ 6 ವಿಕೆಟ್ ಗಳಿಂದ ಗೆದ್ದು ಸತತ 2 ನೇ ಬಾರಿಗೆ ಡಬ್ಲ್ಯುಪಿಎಲ್ ಕಪ್ ನ್ನು ತನ್ನ ಮುಡಿಗೇರಿಸಿಕೊಂಡಿದೆ. ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ ತಂಡ ಡೆಲ್ಲಿ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 203 ರನ್ ಗಳಿಗೆ ಕಟ್ಟಿ ಹಾಕಿತು.
ಉತ್ತಮ ರನ್ ಟಾರ್ಗೆಟ್ ನ್ನು ಬೆನ್ನಟ್ಟಿದ ಆರ್ ಸಿಗೆ ಗ್ರೇಸ್ ಹ್ಯಾರೀಸ್ 7 ಎಸೆತಗಳಲ್ಲಿ 9 ರನ್ ಗಳಿಸಿ ಪೆವಿಲಿಯನ್ ನತ್ತ ನಡೆದಿದ್ದು ಆರಂಭಿಕ ಆಘಾತವಾಗಿತ್ತು. ಆದರೆ ಸ್ಮೃತಿ ಮಂಧಾನ 42 ಎಸೆತಗಳಲ್ಲಿ 87 ರನ್ ಹಾಗೂ ಜಾರ್ಜಿಯಾ ವೋಲ್ 54 ಎಸೆತಗಳಲ್ಲಿ 79 ರನ್ ಗಳಿಸಿದ್ದು ತಂಡದ ಗೆಲುವಿಗೆ ಭದ್ರ ಬುನಾದಿಯಾಯಿತು.
ಕ್ರೀಸ್ ನಲ್ಲಿದ್ದ ನಡಿನ್ ಡಿ ಕ್ಲರ್ಕ್, ರಾಧಾ ಯಾದವ್ ತಂಡವನ್ನು ಗೆಲುವಿನ ದಡ ಸೇರಿಸಿದರು. ರನ್ ಚೇಸಿಂಗ್ ನಲ್ಲಿ ಆರ್ ಸಿಬಿ ಇತಿಹಾಸ ನಿರ್ಮಾಣ ಮಾಡಿದ್ದು, 19.4 ಓವರ್ ಗಳಲ್ಲಿ 204 ರನ್ ಗಳಿಸಿದ್ದು, ಇತಿಹಾಸದಲ್ಲೇ ಅತಿ ದೊಡ್ಡ ರನ್ ಚೇಸಿಂಗ್ ದಾಖಲೆ ನಿರ್ಮಿಸಿದೆ.
ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಆರ್ ಸಿಬಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಮೊದಲು ಫೈನಲ್ಸ್ ಪ್ರವೇಶಿಸಿ ಟ್ರೋಫಿಯನ್ನೂ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಕೊಲಂಬೊದಲ್ಲಿ  ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ

2026ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಕೊಲಂಬೊದಲ್ಲಿ ನಡೆಯುವ ನಿರ್ಣಾಯಕ ಪಂದ್ಯಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು,...

ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿರುವ ಪಾಕಿಸ್ತಾನಕ್ಕೆ ಐಸಿಸಿ ಎಚ್ಚರಿಕೆ ಬಾಲ ಮುದುರಿಕೊಂಡ ಪಾಕಿಸ್ತಾನ

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿರುವ ಮಾತುಗಳನ್ನಾಡುತ್ತಿದ್ದ ಪಾಕಿಸ್ತಾನದ ಬಾಲ ಮುದುರಿಕೊಂಡಂತೆ...

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಿಕ ಪಂದ್ಯದಲ್ಲೇ ಭಾರತ ತಂಡಕ್ಕೆ ಭರ್ಜರಿ ಜಯದೊಂದಿಗೆ  ಟೂರ್ನಿಯಲ್ಲಿ ಶುಭಾರಂಭ

“ಮುಂಬೈ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಆರಂಭಿಕ ಪಂದ್ಯದಲ್ಲೇ ಭಾರತ ತಂಡ ಭರ್ಜರಿ ಜಯ ಸಾಧಿಸುವ...

6ನೇ ಬಾರಿಗೆಅಂಡರ್ 19 ವರ್ಲ್ಡ್ ಕಪ್ ಗೆದ್ದ ಭಾರತೀಯ ಯುವ ತಂಡ

ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ದಾಖಲೆಯ...