ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

2

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ. ಈ ಬಗ್ಗೆ ಹೈಕಮಾಂಡ್ ಸ್ಪಷ್ಟವಾಗಿ ಸಿಗ್ನಲ್ ಕೊಟ್ಟಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಬಳಿಕ ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಯತೀಂದ್ರ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು ಎಂದು ತಿರುಗೇಟು ನೀಡಿದರು.
ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಯತೀಂದ್ರರ ಈ‌ ಹೇಳಿಕೆಯನ್ನು ಗೌರವದಿಂದ ಸ್ವೀಕರಿಸುತ್ತೇನೆ. ಅವರೇ ನಮ್ಮ ಹೈಕಮಾಂಡ್ ಅಂತ ಒಪ್ಪಿಕೊಳ್ಳೋಣ. ಯತೀಂದ್ರ ಅಥವಾ ಶಿವಗಂಗಾ ಹೇಳಿಕೆ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ಈ ಬಗ್ಗೆ ಏನು ಪ್ರತಿಕ್ರಿಯಿಸಬೇಕೋ ಅದನ್ನು ದೆಹಲಿಯಲ್ಲಿ ಪ್ರತಿಕ್ರಿಯಿಸುತ್ತೇನೆ ಎಂದರು.
ಇನ್ನು ಪುತ್ತೂರು ಕಾಂಗ್ರೆಸ್ ಕಚೇರಿ ಶಿಲಾನ್ಯಾಸದಲ್ಲಿ ಮುಸ್ಲಿಂ ಮುಖಂಡರ ಹೆಸರು ಕೈಬಿಟ್ಟ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಕಾಂಗ್ರೆಸ್ ಜಾತಿ ಮೇಲಲ್ಲ ನೀತಿ ಮೇಲೆ ರಾಜಕಾರಣ ಮಾಡುತ್ತದೆ. ನಮಗೆ ಎಲ್ಲಾ ಜಾತಿ, ಧರ್ಮಗಳೂ ಬೇಕು. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಅಸೂಯೆ ಇರುವವರು ಈ ರೀತಿ ಮಾತನಾಡುತ್ತಾರೆ ಎಂದರು.

Leave a comment

Leave a Reply

Your email address will not be published. Required fields are marked *

Related Articles

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...

ಕೇಂದ್ರ ಸಚಿವ ಸೋಮಣ್ಣ ಅವರತ್ತ ಕುರ್ಚಿ ಎಸೆದು ಮುತ್ತಿಗೆ ಹಾಕಿ ಕೈ ಕಾರ್ಯಕರ್ತರ ಆಕ್ರೋಶ

ಕೇಂದ್ರ ಸಚಿವ ಸೋಮಣ್ಣ ಅವರತ್ತ ಕುರ್ಚಿ ಎಸೆದು ಕೈ ಕಾರ್ಯಕರ್ತರ ಆಕ್ರೋಶ ಕೊಪ್ಪಳದ ಹಿಟ್ನಾಳ ಗ್ರಾಮದಲ್ಲಿ...