ಮುಂಬೈ ಮಹಾನಗರಪಾಲಿಕೆಯ ಮೇಯರ್ ಚುನಾವಣೆ ಬಿಜೆಪಿ ಅಭ್ಯರ್ಥಿ ಯಾಗಿ ರಿತು ತಾವಡೆ ಆಯ್ಕೆ

39

“ಮುಂಬೈ: ಮುಂಬೈ ಮಹಾನಗರಪಾಲಿಕೆಯ (ಬಿಎಂಸಿ) ಮೇಯರ್ ಚುನಾವಣೆಗೆ ರಿತು ತಾವಡೆ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಯಾಗಿ ಶನಿವಾರ ಆಯ್ಕೆ ಮಾಡಿದೆ. ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ.
ರಿತು ತಾವಡೆ ವಾರ್ಡ್‌ ಸಂಖ್ಯೆ 132ರ ಕಾರ್ಪೊರೇಟರ್ ಆಗಿದ್ದಾರೆ. ಸಂಜಯ್ ಘಾಡಿ ವಾರ್ಡ್‌ ಸಂಖ್ಯೆ 5ರಿಂದ ಆಯ್ಕೆಯಾಗಿದ್ದಾರೆ. ಸಂಜಯ್‌ ಈ ಹಿಂದೆ 15 ತಿಂಗಳ ಕಾಲ ಉಪಮೇಯರ್ ಆಗಿ ಕೆಲಸ ಮಾಡಿದ್ದರು. 227 ಸದಸ್ಯ ಬಲದ ಪಾಲಿಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು. ಬಿಜೆಪಿ 89 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶಿವಸೇನೆ 29 ಸ್ಥಾನಗಳನ್ನು ಗೆದ್ದುಕೊಂಡಿದೆ.
ಒಟ್ಟಾರೆ 118 ಸದಸ್ಯ ಬಲ ಹೊಂದಿರುವ ಈ ಮೈತ್ರಿಕೂಟ ಸರಳ ಬಹುಮತ ಪಡೆದುಕೊಂಡಿದೆ. 25 ವರ್ಷಗಳ ಕಾಲ ಪಾಲಿಕೆ ಆಡಳಿತ ನಡೆಸಿದ್ದ ಶಿವಸೇನೆ (ಯುಬಿಟಿ) ಈ ಬಾರಿ 65 ಸ್ಥಾನಗಳನ್ನು ಗೆದ್ದು ಅಧಿಕಾರದಿಂದ ಕೆಳಗಿಳಿದಿದೆ.
ಅದರ ಮೈತ್ರಿ ಪಕ್ಷಗಳಾದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) 6, ಎನ್‌ಸಿಪಿ (ಶರದ್) 1 ಸ್ಥಾನ ಪಡೆದಿತ್ತು. ಇತರೆ ಪಕ್ಷಗಳಾದ ಕಾಂಗ್ರೆಸ್ 24, ಎಐಎಂಐಎಂ 8, ಎನ್‌ಸಿಪಿ (ಅಜಿತ್) 3, ಸಮಾಜವಾದಿ ಪಕ್ಷ 2 ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...