ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಪ್ರಕರಣ ವರದಿಯಾದ ಬೆನ್ನಲ್ಲೇ ಪೊಲೀಸರು ಬಾಲಕಿಯ ಸಂಬಂಧಿ ಎಂದು ಹೇಳಲಾದ ಆರೋಪಿಯ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಿದ್ದಾರೆ. 

ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನಿರ್ದೇಶಕ (ಕೆಆರ್‌ಇಐಎಸ್) ಕಾಂತರಾಜು, ಶಾಲೆಯ ಪ್ರಾಂಶುಪಾಲರು ಮತ್ತು ವಾರ್ಡನ್ ಅವರನ್ನು ಅಮಾನತುಗೊಳಿಸಲು ಆದೇಶಿಸಿದ್ದಾರೆ. 
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವಾಗ ಗರ್ಭಧಾರಣೆಯು ಬೆಳಕಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ಸುಮಾರು 25 ವರ್ಷ ವಯಸ್ಸಿನ ಆರೋಪಿ ಶ್ರೀಹರಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ.
ವಿವಿಧ ಇಲಾಖೆಯ ಮುಖ್ಯಸ್ಥರು ಶಾಲೆಗೆ ಭೇಟಿ ನೀಡಿದ್ದು, ಮಹಿಳಾ ಅಧಿಕಾರಿಗಳು ಸಂತ್ರಸ್ತೆಗೆ ಸಮಾಲೋಚನೆ ನಡೆಸುತ್ತಿದ್ದಾರೆ.
Leave a comment