ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಿಕ ಪಂದ್ಯದಲ್ಲೇ ಭಾರತ ತಂಡಕ್ಕೆ ಭರ್ಜರಿ ಜಯದೊಂದಿಗೆ  ಟೂರ್ನಿಯಲ್ಲಿ ಶುಭಾರಂಭ

2

“ಮುಂಬೈ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಆರಂಭಿಕ ಪಂದ್ಯದಲ್ಲೇ ಭಾರತ ತಂಡ ಭರ್ಜರಿ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಅಮೆರಿಕ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 29 ರನ್ ಅಂತರದಲ್ಲಿ ಭರ್ಜರಿ ಜಯ ದಾಖಲಿಸಿತು

. ಭಾರತ ನೀಡಿದ್ದ 162 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ ಅಮೆರಿಕ ತಂಡ ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 132ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ 29 ರನ್ ಗಳ ಅಂತರದಲ್ಲಿ ಭಾರತದ ಎದುರು ಮಂಡಿಯೂರಿತು

ಯುಎಸ್ಎ ಪರ ಮಿಲಿಂಗ್ ಕುಮಾರ್ 34, ಸಂಜಯ್ ಕೃಷ್ಣಮೂರ್ತಿ 37 ಮತ್ತು ಶುಭಂ ರಂಜನೆ 30 ರನ್ ಗಳ ಹೊರತಾಗಿಯೂ ಯುಎಸ್ಎ ಗುರಿ ತಲುಪಲಾಗಲಿಲ್ಲ. ಅಂತಿಮವಾಗಿ 29 ರನ್ ಗಳ ಅಂತರದಲ್ಲಿ ಪಂದ್ಯ ಸೋತಿತು. ಭಾರತದ ಪರ ಅರ್ಶ್ ದೀಪ್ ಸಿಂಗ್, ಮಹಮದ್ ಸಿರಾಜ್ ಮತ್ತು ಅಕ್ಸರ್ ಪಟೇಲ್ ತಲಾ 2 ವಿಕೆಟ್ ಪಡೆದರು. ವರುಣ್ ಚಕ್ರವರ್ತಿ 1 ವಿಕೆಟ್ ಪಡೆದರು.

Leave a comment

Leave a Reply

Your email address will not be published. Required fields are marked *

Related Articles

ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿರುವ ಪಾಕಿಸ್ತಾನಕ್ಕೆ ಐಸಿಸಿ ಎಚ್ಚರಿಕೆ ಬಾಲ ಮುದುರಿಕೊಂಡ ಪಾಕಿಸ್ತಾನ

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿರುವ ಮಾತುಗಳನ್ನಾಡುತ್ತಿದ್ದ ಪಾಕಿಸ್ತಾನದ ಬಾಲ ಮುದುರಿಕೊಂಡಂತೆ...

6ನೇ ಬಾರಿಗೆಅಂಡರ್ 19 ವರ್ಲ್ಡ್ ಕಪ್ ಗೆದ್ದ ಭಾರತೀಯ ಯುವ ತಂಡ

ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ದಾಖಲೆಯ...

ಸತತ ಎರಡನೇ ಬಾರಿ ಮಹಿಳಾ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು

“ವಡೋದರಾದಲ್ಲಿ ನಡೆದ ಡಬ್ಲ್ಯುಪಿಎಲ್ 2026 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ತಂಡದ ವಿರುದ್ಧ...

ಭಾರತ ವಿರುದ್ಧದ ಟಿ20 ವಿಶ್ವಕಪ್ 2026ರ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸುವ ಭೀತಿ

ಫೆಬ್ರುವರಿ 15 ರಂದು ನಡೆಯಲಿರುವ ಭಾರತ ವಿರುದ್ಧದ ಟಿ20 ವಿಶ್ವಕಪ್ 2026ರ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸುವ...