ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

68

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ ನಂತರ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ ಎ ಸಲೀಮ್ ಅವರು ಸೋಮವಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಈ ಸಂಬಂಧ ಫೆಬ್ರವರಿ 7 ರಂದು ಪೊಲೀಸ್ ಮಹಾನಿರ್ದೇಶಕರ ಕಚೇರಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಪೊಲೀಸ್‌ ಠಾಣೆಗಳಲ್ಲಿಯೂ ಇದನ್ನು ಪಾಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಮಾರ್ಚ್ 28, 2025 ರಂದು ಸುಪ್ರೀಂ ಕೋರ್ಟ್, ಕರಣವೊಂದರಲ್ಲಿ ನೀಡಿದ ನಿರ್ದೇಶನಗಳನ್ನು ಪಾಲಿಸುವಂತೆ ರಾಜ್ಯದ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದ ಎಫ್‌ಐಆರ್‌ಗಳನ್ನು ಏಕಾಏಕಿ ದಾಖಲಿಸುವುದು ಮತ್ತು ಬಂಧನಗಳನ್ನು ತಪ್ಪಿಸಲು ರಾಜ್ಯದ ಪೊಲೀಸ್ ಅಧಿಕಾರಿಗಳಿಗೆ ಈ ಮಾರ್ಗಸೂಚಿಗಳನ್ನು ಪಾಲಿಸಲು ಸೂಚಿಸಲಾಗಿದೆ” ಎಂದು ಪ್ರಕಟಣೆ ತಿಳಿಸಿದೆ. ಸುತ್ತೋಲೆಯ ಪ್ರಕಾರ, ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಯಾವುದೇ ದೂರು ಅಥವಾ ಮಾಹಿತಿಯನ್ನು ಸ್ವೀಕರಿಸಿದಾಗ, ಪೊಲೀಸರು ಪ್ರಾಥಮಿಕ ತನಿಖೆ ನಡೆಸಬೇಕು. ಮಾನಹಾನಿ ಅಥವಾ ಅಂತಹುದೇ ಪ್ರಕರಣಗಳಲ್ಲಿ ದೂರು ನೀಡುವವರು ಕಾನೂನಿನ ಪ್ರಕಾರ ‘ನೊಂದ ವ್ಯಕ್ತಿ’ ಆಗಿರಬೇಕು.

ಸಂಬಂಧವಿಲ್ಲದ ಮೂರನೇ ವ್ಯಕ್ತಿ ನೀಡುವ ದೂರುಗಳನ್ನು (ಗಂಭೀರ ಅಪರಾಧಗಳನ್ನು ಹೊರತುಪಡಿಸಿ) ಸ್ವೀಕರಿಸಬಾರದು. ದೂರಿನಲ್ಲಿ ಉಲ್ಲೇಖಿಸಲಾದ ವಿಷಯವು ಮೇಲ್ನೋಟಕ್ಕೆ ಅಪರಾಧವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಎಫ್‌ಐಆರ್ ದಾಖಲಿಸುವ ಮುನ್ನ ಕಡ್ಡಾಯವಾಗಿ ಪ್ರಾಥಮಿಕ ವಿಚಾರಣೆ ನಡೆಸಬೇಕು. ದ್ವೇಷ ಬಿತ್ತುವುದು, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದು ಅಥವಾ ದೇಶದ್ರೋಹದಂತಹ ಆರೋಪಗಳಿದ್ದಾಗ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವಂತಹ ಸ್ಪಷ್ಟ ಸಾಕ್ಷ್ಯಗಳಿದ್ದರೆ ಮಾತ್ರ ಪ್ರಕರಣ ದಾಖಲಿಸಬೇಕು.

ಕೇದಾರನಾಥ್ ಸಿಂಗ್ ಮತ್ತು ಶ್ರೇಯಾ ಸಿಂಘಾಲ್ ಪ್ರಕರಣದ ತೀರ್ಪುಗಳನ್ನು ಇಲ್ಲಿ ಪರಿಗಣಿಸಬೇಕು. ಕಟುವಾದ ಅಥವಾ ಆಕ್ಷೇಪಾರ್ಹ ರಾಜಕೀಯ ಭಾಷಣ/ಪೋಸ್ಟ್‌ಗಳಿಗೆ ಯಾಂತ್ರಿಕವಾಗಿ ಕೇಸ್ ದಾಖಲಿಸಬಾರದು. ಸಂವಿಧಾನದ 19(1)(ಎ) ಅಡಿಯಲ್ಲಿರುವ ವಾಕ್ ಸ್ವಾತಂತ್ರ್ಯವನ್ನು ಗೌರವಿಸಬೇಕು. ಪೋಸ್ಟ್‌ನಿಂದ ಸಾರ್ವಜನಿಕ ಶಾಂತಿಗೆ ತಕ್ಷಣದ ಅಪಾಯವಿದ್ದರೆ ಮಾತ್ರ ಕಾನೂನು ಕ್ರಮ ಕೈಗೊಳ್ಳಬೇಕು. ಸುಪ್ರೀಂ ಕೋರ್ಟ್‌ನ ಅರ್ನೇಶ್ ಕುಮಾರ್ ಪ್ರಕರಣದ ಮಾರ್ಗಸೂಚಿಯಂತೆ, ಅನಗತ್ಯವಾಗಿ ಅಥವಾ ಯಾಂತ್ರಿಕವಾಗಿ ಯಾರನ್ನೂ ಬಂಧಿಸಬಾರದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...