ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

39

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಮಂಗಳವಾರ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ, ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.

ಈ ಹಿಂದೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಜಾಮೀನು ನೀಡಲು ಸೆಷನ್ಸ್‌ ನ್ಯಾಯಾಲಯ ನಿರಾಕರಿಸಿತ್ತು. ಬಳಿಕ ಅವರು ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದೀಗ, ಹೈಕೋರ್ಟ್‌ ಕೂಡ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಭೈರತಿ ಬಸವರಾಜ್ ಅವರನ್ನು ಸಿಐಡಿ ಯಾವುದೇ ಸಂದರ್ಭದಲ್ಲೂ ಬಂಧಿಸಬಹುದು. ಭೈರತಿ ಬಸವರಾಜ್ ಅವರು ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ‘ಲುಕ್‌ಔಟ್‌’ ನೋಟಿಸ್‌ ಸಹ ಜಾರಿ ಮಾಡಲಾಗಿದೆ.

ಕಳೆದ ವರ್ಷ ಜುಲೈನಲ್ಲಿ ಭಾರತಿ ನಗರದಲ್ಲಿ ಬಿಕ್ಲು ಶಿವನನ್ನು ಶಸ್ತ್ರಸಜ್ಜಿತ ದಾಳಿಕೋರರು ಕೊಚ್ಚಿ ಕೊಲೆ ಮಾಡಿದ್ದರು. ಹಿಂದಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಎಫ್‌ಐಆರ್‌ನಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಗ್ಯಾಂಗ್‌ಸ್ಟರ್ ಜಗದೀಶ್ ಪದ್ಮನಾಭ ಅಲಿಯಾಸ್ ಜಗ(45)ನನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...