ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

1

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ, ಮುಸ್ಲಿಂ ಯುವಕ ಸೈಯದ್ ಇಮ್ತಿಯಾಜ್ ಹಿಂದೂ ಯುತಿಯನ್ನು ಪ್ರೀತಿಸಿ ಮದುವೆ ನಾಟಕವಾಡಿ ಇಸ್ಲಾಂಗೆ ಮತಾಂತರ ಮಾಡಿ ಮಗುವನ್ನೂ ಕೈಗೆ ಕೊಟ್ಟು ಈಗ ಎಸ್ಕೇಪ್ ಆಗಿದ್ದಾನೆ.
ಕೋಲ್ಕತ್ತಾ ಮೂಲದ ಬ್ರಾಹ್ಮಣ ಯುವತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪರಿಚಯಿಸಿಕೊಂಡಿದ್ದ ಸೈಯದ್ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದನು. ನಂತರ ಯುವತಿಯನ್ನು ಇಸ್ಲಾಂಗೆ ಮತಾಂತರ ಮಾಡಿ, ಜೈನಬ್ ಎಂದು ಹೆಸರನ್ನು ಬದಲಿಸಿದ್ದನು. 2025ರ ಜು.18ರಂದು ಇಬ್ಬರೂ ರಿಜಿಸ್ಟರ್ ಮದುವೆಯಾಗಿದ್ದರು.
ಇದಾದ ಬಳಿಕ ಇಬ್ಬರು ಕೋಲ್ಕತ್ತಾಗೆ ತೆರಳಿ ನೆಲೆಸಿದ್ದರು. ಅಲ್ಲಿ ಜೈನೆಬ್ ಹೆಣ್ಣುಮಗುವಿಗೆ ಜನ್ಮ ನೀಡಿದ್ದಳು. ಮಗುವಾಗುತ್ತಿದ್ದಂತೆ ಪತ್ನಿ ಹಾಗೂ ಮಗುವನ್ನು ಬಿಟ್ಟು ಸೈಯದ್ ಎಸ್ಕೇಪ್ ಆಗಿದ್ದಾನೆ. ಹೀಗಾಗಿ ಮೋಸ ಹೋಗಿರುವ ಯುವತಿ ಮಗುವಿನೊಂದಿಗೆ ಬೆಂಗಳೂರಿಗೆ ಬಂದು ಪತಿಯನ್ನು ಹುಡುಕಿಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದು, ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...

ಹಿಂದೂ ಯುವಕನ ಮನೆಗೆ ಬೆಂಕಿ ಹಚ್ಚಿದ ಮುಸ್ಲಿಂ ಯುವಕನನ್ನು ತಕ್ಷಣ  ಬಂಧಿಸಿದ ಪೊಲೀಸರು ತಪ್ಪಿದ ಅನಾಹುತ

“ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಹಿಂದೂ ವ್ಯಕ್ತಿಯೊಬ್ಬರ ಮನೆಗೆ...