ದಾಖಲೆಯ 17ನೇ ಬಜೆಟ್ ಮಂಡಿಸಲು ಸಿಎಂ ಸಿದ್ದರಾಮಯ್ಯ ತಯಾರಿ

17

ಬೆಂಗಳೂರು ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟದ ನಡುವೆ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ.

ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ತಮ್ಮ ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಲು ಸಜ್ಜಾಗಿದ್ದಾರೆ.

ಮಾರ್ಚ್ 6 ಬೆಳಗ್ಗೆ 10:15ಕ್ಕೆ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 27ಕ್ಕೆ ಅಂತ್ಯವಾಗಲಿದೆ. ಒಟ್ಟು 14 ದಿನ ಬಜೆಟ್ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ 16 ಬಾರಿ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ತಮ್ಮ 17ನೇ ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಫೆಬ್ರವರಿ 1 ಕೇಂದ್ರ ಬಜೆಟ್: ನಿರ್ಮಲಾಸೀತಾರಾಮನ್ ಹಣಕಾಸು ಸಚಿವೆ ಆಗಿ ಸತತವಾಗಿ ಒಂಬತ್ತನೆಯ ಬಜೆಟ್ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಒಂಬತ್ತನೆಯ ಬಾರಿಗೆ ಬಜೆಟ್‌ ಮಂಡನೆ...

ಸಾಲ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ, ರಿಸರ್ವ್ ಬ್ಯಾಂಕ್ ಕರಡು ಮಾರ್ಗಸೂಚಿ ಪ್ರಕಟ

ಹೊಸದಿಲ್ಲಿ : ಸಾಲ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ, ರಿಸರ್ವ್ ಬ್ಯಾಂಕ್ ಕರಡು ಮಾರ್ಗಸೂಚಿ ಪ್ರಕಟ ಯಾವುದೇ...

ಪ್ರತಿ ಡಾಲರ್ ಗೆ 91.07 ರೂ. ಇದ್ದ ರುಪಾಯಿ ಮೌಲ್ಯ ತ್ವರಿತವಾಗಿ ಚೇತರಿಕೆ

ಮುಂಬೈ : ಸತತ 10 ದಿನಗಳಿಂದ ಇಳಿಕೆಯಾಗಿದ್ದ ರುಪಾಯಿ ಮೌಲ್ಯ ಡಿ. 17ರಂದು ಕೊಂಚ ಏರಿಕೆ....

 ಷೇರು ಮಾರುಕಟ್ಟೆ ಹೂಡಿಕೆ ಬಗ್ಗೆ ಮಾತನಾಡುವಂತೆ ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೋ ವೈರಲ್ ವಂಚಕರ ವಿರುದ್ಧ ದೂರು

ಬೆಂಗಳೂರು:  ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೋ ವೈರಲ್ ವಂಚಕರ ವಿರುದ್ಧ ದೂರು ಮಲ್ಲೇಶ್ವರಂ ಪೊಲೀಸರಿಂದ ಸ್ವಯಂಪ್ರೇರಿತ...