ನಾಯಕತ್ವ ಬದಲಾವಣೆ ಸಿಎಂ ಸಿದ್ದರಾಮಯ್ಯ ಆಪ್ತ ಬಣದ  ಶಾಸಕರ  ವಿದೇಶ ಪ್ರವಾಸ

26

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ, ನಾಯಕರ ಬಹಿರಂಗ ಹೇಳಿಕೆಗಳು ಜೋರಾಗಿಯೇ ನಡೆಯುತ್ತಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಆಪ್ತ ಬಣದ ಹಲವು ಶಾಸಕರು ಇಂದು ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಮೊದಲು ಸರ್ಕಾರಿ ಪ್ರಾಯೋಜಿತ ಟೂರ್ ಎಂದು ಹೇಳಲಾಗುತ್ತಿದ್ದರೂ ಇದೀಗ ಅವರು ಸ್ವಂತ ಖರ್ಚಿನಲ್ಲಿ ಹೋಗುತ್ತಿದ್ದಾರೆ ಎನ್ನಲಾಗುತ್ತಿದೆ. ಕಳೆದ ಮಧ್ಯರಾತ್ರಿ 12.20ರ ವಿಮಾನದಲ್ಲಿ 11 ಶಾಸಕರು, ಎಂಎಲ್ಸಿಗಳು ವಿದೇಶಕ್ಕೆ ಹಾರಿದ್ದಾರೆ. ಮಲೇಷಿಯನ್ ಏರ್‌ಲೈನ್ಸ್‌ನ MH 193 ವಿಮಾನದಲ್ಲಿ ಶಾಸಕರು ತೆರಳಿದ್ದಾರೆ.

ಆಸ್ಟ್ರೇಲಿಯಾಗೆ ನೇರ ವಿಮಾನ ಇಲ್ಲದ ಕಾರಣ ಟ್ರಾನ್ಸಿಟ್ ಫ್ಲೈಟ್‌ ಮೂಲಕ ಹೋಗುತ್ತಿದ್ದಾರೆ. ಬೆಂಗಳೂರಿನಿಂದ ಮಲೇಷ್ಯಾ ರಾಜಧಾನಿ ಕೌಲಾಲಂಪುರಕ್ಕೆ ತೆರಳುವ ಶಾಸಕರು, ಅಲ್ಲಿಂದ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸುತ್ತಾರೆ. ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಹೋಗುವ ಶಾಸಕರು ಮಾರ್ಚ್ 1ರವರೆಗೆ ಅಲ್ಲಿಯೇ ಉಳಿದುಕೊಳ್ಳಲಿದ್ದಾರೆ. ನಿನ್ನೆ 11 ಶಾಸಕರು ಮಾತ್ರ ವಿದೇಶಕ್ಕೆ ಹಾರಿದ್ದಾರೆ.

ಮತ್ತೊಂದೆಡೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಪತ್ನಿ ಹಾಗೂ ಸಂಬಂಧಿಕರ ಜೊತೆಗೆ ಕೊಲಂಬಿಯಾಗೆ ತೆರಳಿದ್ದಾರೆ. ನಿನ್ನೆ ಬೆಳಗ್ಗೆ 7 ಸ್ನೇಹಿತರು, ಸಂಬಂಧಿಕರು, ಪತ್ನಿ ಜತೆ ಎಸ್ಎಸ್ ಮಲ್ಲಿಕಾರ್ಜುನ ಕೆಂಪೇಗೌಡ ಏರ್ಪೋರ್ಟ್ನಿಂದ ಥೈಲ್ಯಾಂಡ್ನ ಪುಕೆಟ್ ನಗರಕ್ಕೆ ತೆರದ್ದು, ಅಲ್ಲಿಂದ ದಕ್ಷಿಣ ಅಮೆರಿಕಾದ ಕೊಲಂಬಿಯಾಗೆ ಪ್ರಯಾಣ ಬೆಳೆಸಿದ್ದಾರೆ. ಶಾಸಕರ ವಿದೇಶ ಪ್ರವಾಸದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಯಾರು ಸ್ಪಾನ್ಸರ್ ಮಾಡುತ್ತಿದ್ದಾರೆ ಎಂಬ ಮಾಹಿತಿ ಇಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಆದರೆ, ಸಚಿವ ದಿನೇಶ್ ಗುಂಡೂರಾವ್, ಸ್ಪಾನ್ಸರ್ ಎಂಬುದು ಊಹಾಪೋಹ ಎಂದಿದ್ದಾರೆ. ಇನ್ನು ಶಾಸಕ ಶಿವಗಂಗಾ ಬಸವರಾಜ್, ಶಾಸಕರ ವಿದೇಶಿ ಪ್ರವಾಸಕ್ಕೆ ನನ್ನ ಆಕ್ಷೇಪ ಇಲ್ಲ ಎನ್ನುತ್ತಲೇ, ಬಜೆಟ್ ಸಮಯದಲ್ಲಿ ಹೋಗುವುದು ಸೂಕ್ತ ಅಲ್ಲ ಎಂದಿದ್ದಾರೆ. ಮತ್ತೊಂದೆಡೆ ಯತೀಂದ್ರ ಸಿದ್ದರಾಮಯ್ಯ, ಹೋಗುವವರಿಗೆ ಬೇಡ ಎನ್ನಲು ಆಗಲ್ಲ ಎಂದಿದ್ದಾರೆ. ಶಾಸಕ ಇಕ್ಬಾಲ್ ಹುಸೇನ್, ರಾಮನಗರವೇ ನನ್ನ ಪಾಲಿನ ಫಾರಿನ್ ಎಂದಿದ್ದು, ಕೆಎನ್ ರಾಜಣ್ಣ ಲೋಕೋ ಭಿನ್ನ ರುಚಿಃ ಎಂದು, ಶಾಸಕರು ಸ್ವಂತ ಖರ್ಚಿನಲ್ಲಿ ಖಾಸಗಿ ಪ್ರವಾಸ ಮಾಡಿದರೆ ತಪ್ಪೇನು ಎಂದು ಕೇಳಿದ್ದಾರೆ.

‘ನಾಯಕತ್ವ ಬದಲಾವಣೆ ವಿಚಾರವಾಗಿ ಸಮಯ ಬಂದಾಗ ಸಿದ್ದರಾಮಯ್ಯನವರೇ ಮಾತನಾಡುತ್ತಾರೆ’: ಡಿ.ಕೆ ಶಿವಕುಮಾರ್ ವಿದೇಶಕ್ಕೆ ತೆರಳಿದ ಕಾಂಗ್ರೆಸ್ ಶಾಸಕರು ಯಾರೆಲ್ಲ? ದೇವೇಂದ್ರಪ್ಪ, ಜಗಳೂರು ಶಾಸಕ ಹೆಚ್.ಡಿ ತಮ್ಮಯ್ಯ, ಚಿಕ್ಕಮಗಳೂರು ಶಾಸಕ ಹಂಪನಗೌಡ ಬಾದರ್ಲಿ, ಸಿಂಧನೂರು ಶಾಸಕ ಪುಟ್ಟರಂಗಶೆಟ್ಟಿ, ಚಾಮರಾಜನಗರ ಶಾಸಕ ಬಿ.ಎಂ ನಾಗರಾಜ್, ಸಿರಗುಪ್ಪ ಶಾಸಕ ಯಶವಂತರಾಯಗೌಡ ಪಾಟೀಲ, ಇಂಡಿ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್, ಸಚಿವ ಶರಣಗೌಡ ಬಯ್ಯಾಪುರ, ಎಂಎಲ್ಸಿ ವಸಂತ್ ಕುಮಾರ್, ಎಂಎಲ್ಸಿ ನಾಗರಾಜ್ ಯಾದವ್, ಎಂಎಲ್ಸಿ ಡಾ. ಡಿ. ತಿಮಯ್ಯ, ಎಂಎಲ್ಸಿ

Leave a comment

Leave a Reply

Your email address will not be published. Required fields are marked *

Related Articles

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...

ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ ಅಧಿಕಾರಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅವಕಾಶ ನೀಡುವುದಿಲ್ಲ :: ಗೃಹ ಸಚಿವ ಡಾ.ಜಿ.ಪರಮೇಶ್ವರ್

“ಬೆಂಗಳೂರು: ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ. ಯಾವುದೇ ಅಧಿಕಾರಿಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಲು ಅವಕಾಶ...

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಕರಪತ್ರ ಹಂಚಿಕೆ ಆರೋಪ ಇಬ್ಬರು ಪೊಲೀಸ್ ಅಧಿಕಾರಿಗಳ ವರ್ಗಾವಣೆ

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ...