ಲಂಚ ಆರೋಪ ವಿಚಾರಣೆ ನಂತರ ಉಲ್ಟಾ ಹೊಡೆದ ಸಾಮಾಜಿಕ ಕಾರ್ಯಕರ್ತಶಾಲಿನಿ ರಜನೀಶ್ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

16
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಲಂಚ ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ಇದೀಗ ಸಿಸಿಬಿ ಪೊಲೀಸರ ವಿಚಾರಣೆ ಬಳಿಕ ಉಲ್ಟಾ ಹೊಡೆದಿದ್ದಾರೆ. ಸಿಸಿಬಿ ವಿಚಾರಣೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.


ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಸ್ನೇಹಮಯಿ ಕೃಷ್ಣ ಅವರು, ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ಅವರು ಶಾಲಿನಿ ರಜನೀಶ್ ಅವರಿಗೆ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆಂದು ಗಂಭೀರ ಆರೋಪ ಮಾಡಿದ್ದರು.
ಈ ಸಂಬಂಧ ಸಿಸಿಬಿ ಪೊಲೀಸರು ನಿನ್ನೆ ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ಮಾಡಿತ್ತು. ಅಲ್ಲದೆ ಮೈಸೂರಿನ ಅವರ ಎರಡು ಮನೆ, ಒಂದು ಕಚೇರಿ ಮೇಲೂ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಕೆಲವು ಪ್ರಮುಖ ದಾಖಲೆಗಳನ್ನ ಸೀಜ್ ಮಾಡಿದ್ದರು. ಸುಮಾರು 23 ಗಂಟೆಗೂ ಹೆಚ್ಚು ಕಾಲ ಸಿಸಿಬಿ ವಿಚಾರಣೆ ಬಳಿಕ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಈಗ ಉಲ್ಟಾ ಹೊಡೆದಿದ್ದಾರೆ. ವಿಚಾರಣೆ ಬಳಿಕ ತಪ್ಪೊಪ್ಪಿಕೊಂಡಿರೋ ಸ್ನೇಹಮಯಿ ಕೃಷ್ಣ, ಆಡಿಯೋ ನಿಜ, ಆದರೆ ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು ಅಂದಿದ್ದಾರೆ.
ಮುಡಾ ಪ್ರಕರಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಬಂಧಿಸಿಲ್ಲ, ವಿಚಾರಣೆ ಮಾತ್ರ ತಮ್ಮ ಬಂಧನದ ಕುರಿತಾದ ವದಂತಿಗಳಿಗೆ ತೆರೆ ಎಳೆದ ಸ್ನೇಹಮಯಿ ಕೃಷ್ಣ, ‘ಪೊಲೀಸರು ನನ್ನನ್ನು ಬಂಧಿಸಿಲ್ಲ, ಕೇವಲ ನೋಟಿಸ್ ನೀಡಿ ವಿಚಾರಣೆಗೆ ಕರೆದಿದ್ದರು. ನಿನ್ನೆಯಿಂದಲೂ ಪೊಲೀಸರು ನನ್ನನ್ನು ಚೆನ್ನಾಗಿ ನಡೆಸಿಕೊಂಡಿದ್ದಾರೆ. ತನಿಖೆಗೆ ನಾನು ಸಂಪೂರ್ಣ ಸಹಕಾರ ನೀಡಿದ್ದೇನೆ. ಯಾವುದೇ ನಕಲಿ ದಾಖಲೆಗಳನ್ನು ನಾನು ಸೃಷ್ಟಿಸಿಲ್ಲ’ ಎಂದು ಹೇಳಿದ್ದಾರೆ. ಶಾಲಿನಿ ರಜನೀಶ್ಗೆ ಕ್ಷಮೆ ಕೇಳಿದ ಸ್ನೇಹಮಯಿ ಸ್ನೇಹಮಯಿ ಕೃಷ್ಣ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
ವಿನೋದ್ ಮತ್ತು ನಟೇಶ್ ನಡುವಿನ ಹಣಕಾಸಿನ ವಿವಾದಕ್ಕೆ ಸಂಬಂಧಿಸಿದ ಆಡಿಯೋದಲ್ಲಿ, ಶಾಲಿನಿ ರಜನೀಶ್ ಅವರ ಬಗ್ಗೆ ನೀಡಲಾದ ಮಾಹಿತಿ ಸುಳ್ಳು. ಹೀಗಾಗಿ ನನ್ನ ತಪ್ಪಿಗಾಗಿ ನಾನು ಶಾಲಿನಿ ರಜನೀಶ್ ಅವರಗೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...

ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ ಅಧಿಕಾರಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅವಕಾಶ ನೀಡುವುದಿಲ್ಲ :: ಗೃಹ ಸಚಿವ ಡಾ.ಜಿ.ಪರಮೇಶ್ವರ್

“ಬೆಂಗಳೂರು: ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ. ಯಾವುದೇ ಅಧಿಕಾರಿಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಲು ಅವಕಾಶ...

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಕರಪತ್ರ ಹಂಚಿಕೆ ಆರೋಪ ಇಬ್ಬರು ಪೊಲೀಸ್ ಅಧಿಕಾರಿಗಳ ವರ್ಗಾವಣೆ

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ...