ಭಾರತದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಪಾಕ್‌ನ ಐಎಸ್ಐ ಮತ್ತು ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಬಂಧನ

32
ನವದೆಹಲಿ: ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ISI , ಬಾಂಗ್ಲಾದೇಶದೊಂದಿಗೆ ಸಂಪರ್ಕ ಹೊಂದಿರುವ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಉಡುಪು ಉತ್ಪಾದನಾ ಘಟಕಗಳಿಂದ ಮಿಜಾನೂರ್ ರೆಹಮಾನ್, ಮೊಹಮ್ಮದ್ ಶಬತ್, ಉಮರ್, ಮೊಹಮ್ಮದ್ ಲಿಟನ್, ಮೊಹಮ್ಮದ್ ಶಾಹಿದ್ ಮತ್ತು ಮೊಹಮ್ಮದ್ ಉಜ್ಜಲ್ ಎಂಬ ಆರು ಶಂಕಿತರನ್ನು ಬಂಧಿಸಲಾಗಿದ್ದು, ಇಬ್ಬರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ.


ಬಂಧಿತ ಶಂಕಿತರಲ್ಲಿ ಬಾಂಗ್ಲಾದೇಶಿ ಪ್ರಜೆಯೂ ಸೇರಿದ್ದಾರೆ. ಆರೋಪಿಗಳು ಗುರುತಿನ ಚೀಟಿಗಾಗಿ ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸುತ್ತಿದ್ದರು. ಶಂಕಿತರಿಂದ ಎಂಟು ಮೊಬೈಲ್ ಫೋನ್‌ಗಳು ಮತ್ತು 16 ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮಿಳುನಾಡು ಪೊಲೀಸರು ಶಂಕಿತರನ್ನು ಬಂಧಿಸಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಸಂಘಟನೆಯು ದೆಹಲಿಯ ಕೆಂಪು ಕೋಟೆ ಮತ್ತು ಚಾಂದನಿ ಚೌಕ್‌ನಲ್ಲಿರುವ ದೇವಾಲಯ ಸೇರಿದಂತೆ ದೇಶಾದ್ಯಂತ ಇತರ ಪ್ರಮುಖ ಧಾರ್ಮಿಕ ಸ್ಥಳಗಳ ಬಳಿ ಸ್ಫೋಟಕ್ಕೆ ಸಂಚು ರೂಪಿಸಿದೆ ಎಂದು ಮೂಲಗಳು ಎಚ್ಚರಿಸಿದ್ದವು. ಹೀಗೆ ತಿಳಿಸಿದ ಒಂದು ದಿನದ ಬೆನ್ನಲ್ಲೇ 8 ಮಂದಿಯನ್ನು ಬಂಧಿಸಲಾಗಿದೆ.
ದೇಶದ ಅನೇಕ ಭಾಗಗಳಲ್ಲಿ ವಿಧ್ವಂಸಕ ಚಟುವಟಿಕೆಗಳನ್ನು ಯೋಜಿಸುತ್ತಿರುವ ಶಂಕಿತ ಭಯೋತ್ಪಾದಕ ಮಾಡ್ಯೂಲ್ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಗ್ಯಾರೆಂಟಿ ಯೋಜನೆ ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು...

ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆಲುವಿನ ನಗೆ

“ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್...

ಕೊಲ್ಲೂರು ಮೂಕಾಂಬಿಕಾ ತಾಯಿಯ ದರ್ಶನ ಪಡೆದ ಉದ್ಯಮಿ ಅನಂತ ಅಂಬಾನಿ

“ಉಡುಪಿ: ಸದ್ದು ಗದ್ದಲವಿಲ್ಲದೆ ದೇಶದ ಪ್ರತಿಷ್ಠಿತ ಉದ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅಂಬಾನಿ ಕುಟುಂಬದ ಅನಂತ ಅಂಬಾನಿ...

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ

“ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ...