16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಕೆ ನಿಷೇಧಿಸುವ ವಿಚಾರ  ಚರ್ಚೆಯ ಹಂತದಲ್ಲಿದೆ  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

28

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ವಿಚಾರ ಇನ್ನೂ ಚರ್ಚೆಯ ಹಂತದಲ್ಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಪೋಷಕರಿಂದಲೂ ಒತ್ತಡವಿದ್ದು, ಅನೇಕ ದೇಶಗಳಲ್ಲಿ ಈ ಕ್ರಮವನ್ನು ಕೈಗೊಂಡಿದೆ. ಇಲ್ಲೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು. ನಮ್ಮ ಶಾಲೆಗಳಲ್ಲಿ ಮೊಬೈಲ್ ನಿಷೇಧ ಮಾಡಿದ್ದೇವೆ.

ಮೊಬೈಲ್‌ಗಳ ದುರುಪಯೋಗ ಹೇಗೆ ನಡೆಯುತ್ತಿದೆ ಎಂಬುದನ್ನು ವಿವರಿಸಲು ಸಾಧ್ಯವಿಲ್ಲ. ಅದಕ್ಕಾಗಿಯೇ ಈ ಕುರಿತು ಚರ್ಚೆಗಳು ನಡೆಯುತ್ತಿವೆ. ಹಲವಾರು ದೇಶಗಳು ಮಕ್ಕಳಿಗೆ ಮೊಬೈಲ್ ನಿಷೇಧ ಮಾಡಿವೆ. ಈ ವಿಷಯ ಜಾಗತಿಕ ಮಟ್ಟದಲ್ಲಿಯೂ ಚರ್ಚೆಯಲ್ಲಿದೆ ಎಂದು ತಿಳಿಸಿದರು. ರಾಷ್ಟ್ರೀಯ ನೀರು ಗುಣಮಟ್ಟ ಪ್ರಮಾಣಿತ ಸಂಸ್ಥೆಯು ಬೆಂಗಳೂರು ಕೆರೆಗಳ ನೀರು ಕುಡಿಯಲು ಅರ್ಹವಲ್ಲ ಎಂದು ನೀಡಿರುವ ವರದಿ ಕುರಿತು ಪ್ರತಿಕ್ರಿಯಿಸಿ, ಬೆಂಗಳೂರಿನ ಕೆರೆ ನೀರನ್ನು ಕುಡಿಯಲು ಹಾಗೂ ಸ್ನಾನಕ್ಕೆ ಬಳಸಿ ಎಂದು ಸರ್ಕಾರ ಹೇಳಿಲ್ಲ.

ಈ ಕೆರೆಗಳು ಇರುವುದು ಅಂತರ್ಜಲ ಹೆಚ್ಚಳ ಮಾಡಲು. ತಿಪ್ಪಗೊಂಡನಹಳ್ಳಿ ಕೆರೆ ನೀರನ್ನು ಜಲ ಮಂಡಳಿಯಿಂದ ಶುದ್ಧಿ ಮಾಡಲಾಗುತ್ತಿದೆ. ಬೆಂಗಳೂರಿನ ಕೆರೆಗಳ ನೀರು ಕುಡಿಯಲು, ಸ್ನಾನ‌ ಮಾಡಲು ಅಲ್ಲ ಎಂದು ಸ್ಪಷ್ಟಪಡಿಸಿದರು. ‘ವಿಬಿ ಜಿ ರಾಮ್ ಜಿ’ ಕಾಯ್ದೆ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿ, ‘ಈ ವಿಚಾರವಾಗಿ ಕೇಂದ್ರ ಸರ್ಕಾರ ಯಾವುದೇ ಸ್ಪಷ್ಟನೆ ನೀಡಿಲ್ಲ. ಯಾವುದೇ ನಿರ್ದೇಶನವನ್ನೂ ನೀಡಿಲ್ಲ. ಈ ಹಿಂದೆ ಕೂಲಿ ಮಾಡಿದವರಿಗೂ ಹಣ ಬಿಡುಗಡೆ ಮಾಡಿಲ್ಲ. ಕಾಯ್ದೆಯನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಲಾಗಿದೆ. ಕೂಲಿ ಕಾರ್ಮಿಕರು, ಬಡವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇದರ ವಿರುದ್ಧ ದೊಡ್ಡ ಹೋರಾಟ ನಡೆಸುತ್ತಿದ್ದೇವೆ’ ಎಂದರು

Leave a comment

Leave a Reply

Your email address will not be published. Required fields are marked *

Related Articles

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...

ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ...