ರಾಜ್ಯದ ರಾಜಕೀಯ ಬೆಳವಣಿಗೆ ಕುರಿತು ಹೈಕಮಾಂಡ್ ನಿರ್ಧಾರಕ್ಕೆ ಸಂಪೂರ್ಣ ಬದ್ಧ: ಸಿಎಂ ಸಿದ್ದರಾಮಯ್ಯ

15

ಉಡುಪಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಗಳಿಗೆ ಸಂಪೂರ್ಣವಾಗಿ ಬದ್ಧನಾಗಿದ್ದೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ಕಾರ್ಕಳ ಭೇಟಿ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹೈಕಮಾಂಡ್ ನಿರ್ಧಾರವನ್ನು ನಾವು ಅನುಸರಿಸುತ್ತೇವೆ” ಎಂದು ಹೇಳಿದರು.

ಮೊದಲ ಬಾರಿ ಶಾಸಕರಾದವರು ಮಂತ್ರಿಯಾಗಬೇಕು ಎಂದು ಬೇಡಿಕೆ ಇಟ್ಟಿರುವ ಬಗ್ಗೆ ಹಾಗೂ ಈ ಸಂಬಂಧ ಹೊಸದಾಗಿ ಆಯ್ಕೆಯಾದ 38 ಕಾಂಗ್ರೆಸ್‌ ಶಾಸಕರ ಪೈಕಿ ಕೆಲವರು ಹೈಕಮಾಂಡ್‌ಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿ, ಶಾಸಕರು ತಮ್ಮ ಆಸೆ ವ್ಯಕ್ತಪಡಿಸುವುದು ತಪ್ಪಲ್ಲ. ಸಚಿವ ಸ್ಥಾನ ನೀಡಿ ಎಂದು ಅವರು ಕೇಳುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ. ಎಲ್ಲಾ ಶಾಸಕರಿಗೂ ತಾವು ಸಚಿವರಾಗಬೇಕು ಎಂಬ ಆಸೆ ಇದ್ದೇ ಇರುತ್ತದೆ


ಅದು ಸಹಜ. ಇದರಲ್ಲಿ ತಪ್ಪೇನಿಲ್ಲ. ಆದರೆ, ಮೊದಲ ಬಾರಿಯ ಶಾಸಕರಿಗೆ ಮಂತ್ರಿ ಸ್ಥಾನ ನೀಡಬಾರದು ಎಂಬ ನಿರ್ಣಯ ಕೈಗೊಂಡಿದ್ದೇವೆ. ಈ ಬಗ್ಗೆ ಹೈಕಮಾಂಡ್ ಸೂಚನೆ ಇದೆ. ಹೈಕಮಾಂಡ್‌ ಸೂಚನೆಗಳನ್ನು ಪಾಲಿಸಲಾಗುವುದು ಎಂದು ತಿಳಿಸಿದರು. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಕುರಿತು ಮಾತನಾಡಿ, ಸರ್ಕಾರ ಹಂತ ಹಂತವಾಗಿ 2.5 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದರು.



ಒಳ ಮೀಸಲಾತಿ ಸಂಬಂಧಿತ ವಿಷಯಗಳಿಂದ ನೇಮಕಾತಿಯಲ್ಲಿ ವಿಳಂಬವಾಗಿದ್ದು, ರಾಜ್ಯ ಬಜೆಟ್‌ನಲ್ಲಿ ಅಗತ್ಯ ಘೋಷಣೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಇದೇ ವೇಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆ ದಾಳಿಗಳ ಹೆಚ್ಚಳ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಅರಣ್ಯದಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ಅಳವಡಿಸುವುದು ಹಾಗೂ ವಿಶೇಷ ಕಾರ್ಯಪಡೆ ರಚಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಸರ್ಜಾಪುರ ಸಮೀಪದ ಅಜೀಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಕಾರ್ಯಕರ್ತರಿಂದ ಆಸ್ತಿ ಧ್ವಂಸ ಆರೋಪದ ಕುರಿತು ಮಾತನಾಡಿ, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಆಗುಂಬೆ ಸುರಂಗ ರಸ್ತೆ ಯೋಜನೆ ಬಗ್ಗೆ ಪರಿಸರವಾದಿಗಳೊಂದಿಗೆ ಚರ್ಚಿಸಿ ಅವರ ಆಕ್ಷೇಪಣೆಗಳನ್ನು ಅರಿತು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಪರಶುರಾಮ ಥೀಮ್ ಪಾರ್ಕ್, ಬ್ರಹ್ಮಾವರ ಸಕ್ಕರೆ ಕಾರ್ಖಾನೆ, ಕಾರ್ಕಳ ನರ್ಸಿಂಗ್ ಕಾಲೇಜು ಹಾಗೂ ಮಂಗಳೂರು ಪಿಲಿಕುಳ ಜೈವಿಕ ಉದ್ಯಾನವನದ ಸಮಸ್ಯೆಗಳನ್ನೂ ಪರಿಹರಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.

Leave a comment

Leave a Reply

Your email address will not be published. Required fields are marked *

Related Articles

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...

ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ ಅಧಿಕಾರಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅವಕಾಶ ನೀಡುವುದಿಲ್ಲ :: ಗೃಹ ಸಚಿವ ಡಾ.ಜಿ.ಪರಮೇಶ್ವರ್

“ಬೆಂಗಳೂರು: ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ. ಯಾವುದೇ ಅಧಿಕಾರಿಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಲು ಅವಕಾಶ...

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಕರಪತ್ರ ಹಂಚಿಕೆ ಆರೋಪ ಇಬ್ಬರು ಪೊಲೀಸ್ ಅಧಿಕಾರಿಗಳ ವರ್ಗಾವಣೆ

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ...