ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಪರಿಶಿಷ್ಟ ಜಾತಿಗಳವಿಧೇಯಕ 2025ಕ್ಕೆ ರಾಜ್ಯಪಾಲ ಸಹಿ

24

ಬೆಂಗಳೂರು: ದಲಿತ ಸಮುದಾಯದ ಸಚಿವರು ತಮ್ಮನ್ನು ಭೇಟಿ ಮಾಡಿದ ಬೆನ್ನಲೇ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು, ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಪರಿಶಿಷ್ಟ ಜಾತಿಗಳ(ಒಳ ಮೀಸಲಾತಿ) ವಿಧೇಯಕ 2025ಕ್ಕೆ ಗುರುವಾರ ಸಹಿ ಹಾಕಿದ್ದಾರೆ.
ಒಳ ಮೀಸಲಾತಿ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದರಿಂದ ರಾಜ್ಯಪಾಲರು ಈ ಮಸೂದೆಗೆ ಸಹಿ ಹಾಕದೆ ಪೆಂಡಿಂಗ್ ಇಟ್ಟಿದ್ದರು. ಆದರೆ ದಲಿತ ಸಚಿವರ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಒಳ ಮೀಸಲಾತಿ ಮಸೂದೆಗೆ ಅಂಕಿತ ಹಾಕುವಂತೆ ಮನವಿ ಮಾಡಿತ್ತು.
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಪ್ರಸ್ತಾಪಿಸಿ, ಒಳ ಮೀಸಲಾತಿ ಗೊಂದಲದಿಂದ ನೇಮಕಾತಿ ವಿಳಂಬವಾಗುತ್ತಿದೆ ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಈ ವೇಳೆ ಅಂಕಿತ ಹಾಕುವುದಾಗಿ ಸಚಿವರ ನಿಯೋಗಕ್ಕೆ ರಾಜ್ಯಪಾಲರು ಭರವಸೆ ನೀಡಿದ್ದರು. ಇದೀಗ ಎಸ್ಸಿ ಒಳ ಮೀಸಲಾತಿ ಮಸೂದೆ ರಾಜ್ಯಪಾಲರು ಸಹಿ ಹಾಕಿದ್ದಾರೆ
ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ 5 ವಿಂಗಡಣೆ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರ, 3 ಗುಂಪುಗಳಾಗಿ ವರ್ಗೀಕರಣ ಮಾಡಿದೆ. 18 ಜಾತಿಗಳಿರುವ ಎಡಗೈ ಸಮುದಾಯಕ್ಕೆ(SC Left ) ಶೇ. 6 ರಷ್ಟು ಮೀಸಲಾತಿ ಹಾಗೂ 20 ಜಾತಿಗಳಿರುವ ಬಲಗೈ ಸಮುದಾಯಕ್ಕೆ (SC Right) ಶೇ. 6 ರಷ್ಟು ಮೀಸಲಾತಿ. ಇನ್ನು 63 ಜಾತಿಗಳಿರುವ ಇತರ ಸಮುದಾಯಕ್ಕೆ ಶೇ. 5 ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...

ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ...