ಎನ್.ಎಸ್ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ

12

ನವದೆಹಲಿ: ಬಾಗೇಪಲ್ಲಿಯ ಎನ್.ಎಸ್ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಎದುರಾಳಿ, ಚುನಾವಣಾ ಆಯೋಗ ಮತ್ತು ಸಂಬಂಧಪಟ್ಟ ವ್ಯಕ್ತಿಗಳಿಗೆ ಅಫಿಡವಿಟ್, ಕೌಂಟರ್ ಅಫಿಡವಿಟ್ ಸಲ್ಲಿಸಲು ಸುಪ್ರೀಂ ಕೋರ್ಟ್ 6 ವಾರಗಳ ಕಾಲಾವಕಾಶ ನೀಡಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (ಭಾಗ್ಯನಗರ) ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ನ ಎಸ್.ಎನ್. ಸುಬ್ಬಾರೆಡ್ಡಿ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಸುಬ್ಬಾ ರೆಡ್ಡಿ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಹಾಗೂ ನ್ಯಾಯಮೂರ್ತಿ ಜಾಯ್‌ಮಲ್ಯ ಬಾಗ್ಚಿ ಪೀಠವು ನಡೆಸಿತು. ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ಆಸ್ತಿ ಘೋಷಣೆ ಮಾಡಿಲ್ಲ,
ಕ್ರಿಮಿನಲ್ ಕೇಸ್‌ಗಳ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು 2023 ಜೂನ್ 24ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆಸ್ತಿ ಮಾಹಿತಿಯನ್ನು ಉಲ್ಲಂಘನೆ ಮಾಡಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ ಸುಬ್ಬಾರೆಡ್ಡಿ ಶಾಸಕ ಸ್ಥಾನವನ್ನು ಹೈಕೋರ್ಟ್‌ ಅಸಿಂಧುಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಬ್ಬಾರೆಡ್ಡಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಇಂದು ವಿಚಾರಣೆ ನಡೆಸಿದ ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠವು ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ತಡೆ ನೀಡಿ, ಸೆಪ್ಟೆಂಬರ್ 7ಕ್ಕೆ ವಿಚಾರಣೆ ಮುಂದೂಡಿದೆ. ಇದೇ ವೇಳೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಹಿನ್ನೆಲೆ ಮುಂದಿನ ವಿಚಾರಣೆವರೆಗೂ ಎಸ್‌.ಎನ್‌ ಸುಬ್ಬಾರೆಡ್ಡಿ ಅವರು ಬಾಗೇಪಲ್ಲಿ ಶಾಸಕರಾಗಿ ಮುಂದುವರಿಯಲಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...

ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ ಅಧಿಕಾರಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅವಕಾಶ ನೀಡುವುದಿಲ್ಲ :: ಗೃಹ ಸಚಿವ ಡಾ.ಜಿ.ಪರಮೇಶ್ವರ್

“ಬೆಂಗಳೂರು: ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ. ಯಾವುದೇ ಅಧಿಕಾರಿಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಲು ಅವಕಾಶ...

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಕರಪತ್ರ ಹಂಚಿಕೆ ಆರೋಪ ಇಬ್ಬರು ಪೊಲೀಸ್ ಅಧಿಕಾರಿಗಳ ವರ್ಗಾವಣೆ

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ...