ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದ ಸಂಕಷ್ಟ ವಿಮಾನ ಸಂಚಾರ ರದ್ದು ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ :: ಮುಖ್ಯಮಂತ್ರಿ ಸಿದ್ದರಾಮಯ್ಯ

26

ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದ ಹಲವು ದೇಶಗಳಿಗೆ ಸಂಕಷ್ಟ ಎದುರಾಗಿದೆ. ವಿಮಾನ ಸಂಚಾರ ಹಲವು ರದ್ದಾಗಿರುವುದರಿಂದ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡಿಗರ ಸುರಕ್ಷತೆಗೆ ಎಲ್ಲ ರೀತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.
ದೆಹಲಿ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿರುವುದಾಗಿ ತಿಳಿಸಿದ್ದಾರೆ. ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿ, ಅವರ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ.
ಮಧ್ಯಪ್ರಾಚ್ಯ ದೇಶಗಳಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿರುವ ಕಾರಣ ನಾಡಿಗೆ ಮರಳಲು ಸಾಧ್ಯವಾಗದೆ ಯುದ್ಧಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.
ಸಹಾಯವಾಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯುದ್ಧಪೀಡಿತ ದೇಶಗಳಲ್ಲಿ ನೆಲೆಸಿರುವ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ. ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ನಮ್ಮ‌ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಹೇಳಿದ್ದಾರೆ. ಬಳ್ಳಾರಿ ಮೂಲದ 32 ಮಂದಿ ದುಬೈನಲ್ಲಿ ಸಿಲುಕಿರುವ ಬಗ್ಗೆ ಮಾಜಿ ಸಚಿವರಾದ ನಾಗೇಂದ್ರ ಅವರು ನನಗೆ ಮಾಹಿತಿ ನೀಡಿದ್ದು, ಅವರ ಸುರಕ್ಷತೆಯ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಕೊನೆ ಕ್ಷಣಗಳಲ್ಲಿ ಬದಲಾದ ಸಚಿವ ಸಂಪುಟ 20 ನೂತನ ಸಚಿವರ ಬದಲು 19 ನೂತನ ಸಚಿವರ ಪ್ರಮಾಣವಚನ ಸ್ವೀಕಾರ

“ಬೆಂಗಳೂರು: ಕೊನೆಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ಸಂಜೆ ವಿಸ್ತರಣೆಯಾಗಿದೆ. ಕಾಂಗ್ರೆಸ್...

ಕಾವೇರಿ ನೀರು ಹಂಚಿಕೆ ಸರ್ವಪಕ್ಷ ಸಭೆ ರಾಜಕೀಯಕ್ಕಿಂತ ರಾಜ್ಯದ ಹಿತಾಸಕ್ತಿ ಮುಖ್ಯ ::ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಕೀಯಕ್ಕಿಂತ ರಾಜ್ಯದ ರೈತರು ಮತ್ತು ಜನರ ಹಿತವೇ...

ಬಾಂಗ್ಲಾದೇಶಿಯರ ಮಾಹಿತಿ ನೀಡಿದ ಭಾರತೀಯ ಪ್ರಜೆ ವಿರುದ್ಧ ಹಲ್ಲೆ ಪ್ರಕರಣ ನಿಮ್ಮ ಓಲೈಕೆ ನಿಲ್ಲಿಸಿ  ರಾಜ್ಯ ಸರಕಾರಕ್ಕೆ ಹೈಕೋರ್ಟ್ ಚಾಟಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದವರ ಬಗ್ಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರೊಬ್ಬರ ವಿರುದ್ಧ ಹಲ್ಲೆ...

ಬಿಪಿಎಲ್ ಕಾರ್ಡ್ ವಾರ್ಷಿಕ ಆದಾಯದ ಮಿತಿ, 3 ಲಕ್ಷ ನಿಗದಿಗೆ ಕ್ರಮ- ಸಚಿವ ಕೆ ಹೆಚ್ ಮುನಿಯಪ್ಪ

ಬೆಂಗಳೂರು: ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯದ ಮಿತಿಯನ್ನು 3 ಲಕ್ಷ ರೂಗೆ ಹೆಚ್ಚಿಸಲು ಕ್ರಮ...