ಕರ್ನಾಟಕ ಬಜೆಟ್ ರಾಜ್ಯದಲ್ಲಿ ಹೊಸದಾಗಿ 12ಪೊಲೀಸ್ ಠಾಣೆಗಳ ಸ್ಥಾಪನೆ ಘೋಷಣೆ

44

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಿದ್ದು, ಪೊಲೀಸ್ ಇಲಾಖೆ ಸೇರಿದಂತೆ ಹಲವು ಇಲಾಖೆಗಳಿಗೆ ಭರಪೂರ ಅನುದಾನ ನೀಡಿದ್ದಾರೆ. ಇಂದು ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ನಾಗರಿಕರ ಸುರಕ್ಷತೆಗಾಗಿ ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಇದರಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸ್ ಠಾಣೆಗಳು ಸೇರಿವೆ. ಹೊಸ ಠಾಣೆಗಳಿಗೆ ಸುಸಜ್ಜಿತ ಕಟ್ಟಡ ಮತ್ತು ಆಧುನಿಕ ಉಪಕರಣಗಳನ್ನು ಒದಗಿಸಲು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟಿದ್ದು, ಹೊಸ ಠಾಣೆಗಳ ಕಾರ್ಯಾಚರಣೆಗಾಗಿ ಅಗತ್ಯವಿರುವ ಪೊಲೀಸ್ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ, ಹಿರಿಯೂರು ಮತ್ತು ಗುಂಡ್ಲುಪೇಟೆಯಂತಹ ಬೆಳೆಯುತ್ತಿರುವ ನಗರಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರಿ ಠಾಣೆಗಳಿಗೆ ಒತ್ತು ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಪೊಲೀಸ್ ಠಾಣೆ, ಸಜಿಪನಡು ಪೊಲೀಸ್ ಠಾಣೆ, ಬೆಳಗಾವಿ ಜಿಲ್ಲೆಯ ಯರಗಟ್ಟಿ ಪೊಲೀಸ್ ಠಾಣೆ, ಯಾದಗಿರಿ ಜಿಲ್ಲೆಯ ಕಕ್ಕೇರಾ ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆಯ ಆನಗೋಡು ಪೊಲೀಸ್ ಠಾಣೆ, ಹಾವೇರಿ ಜಿಲ್ಲೆಯ ತಿಳುವಳ್ಳಿ ಪೊಲೀಸ್ ಠಾಣೆ, ಮೈಸೂರು ಜಿಲ್ಲೆಯ ಉದಯಗಿರಿ ದಕ್ಷಿಣ ಪೊಲೀಸ್ ಠಾಣೆ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಗ್ರಾಮಾಂತರ ಠಾಣೆ, ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ವಲಯದಲ್ಲಿ ಪೊಲೀಸ್ ಠಾಣೆ ಆರಂಭಿಸಲಾಗುತ್ತಿದೆ.
ಇನ್ನು ಇದರ ಜತೆಗೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಶ್ರೇಣಿಯ ಒಟ್ಟು 8,000 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಈ ವರ್ಷ ಭರ್ತಿ ಮಾಡಲಾಗುವುದು. ನೇಮಕಾತಿ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ‘ಖಾಯಂ ಪೊಲೀಸ್ ಮತ್ತು ಪೊಲೀಸ್ ಪೂರಕ ಸೇವೆಗಳ ನೇಮಕಾತಿ ಮಂಡಳಿ’ಯನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಬಿಜೆಪಿಯಲ್ಲಿ ಅಪ್ಪ-ಮಕ್ಕಳ ಸರ್ವಾಧಿಕಾರ ಬಿಜೆಪಿ ತೊರೆದು; ನೆ ಲ ನರೇಂದ್ರ ಬಾಬು ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ನೆಲ ಇಲ್ಲದ ಕಾರಣ ಆ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವು ಖಚಿತದ ನಂತರ ಪಾದಯಾತ್ರೆ ನಾಟಕಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ ಆಕ್ರೋಶ

ಬೆಂಗಳೂರು: ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ ಮೇಲೆ ಪಾದಯಾತ್ರೆ ಆರಂಭವಾಗಿದೆ...

ಮಾಜಿ ಸಚಿವ ನಾಗೇಂದ್ರ ಗೆ ಮತ್ತೆ ಸಂಕಷ್ಟ ಮರು ತೀವ್ರ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜಾರಿ...

ಸಾಲ ಮರುಪಾವತಿಸಿಲ್ಲ  ಕಾರಣಕ್ಕೆ  ಮಹಿಳೆ ಅಪಹರಿಸಿ ಅರೆ ಬೆತ್ತಲೆಗೊಳಿಸಿ  ಹಲ್ಲೆ ನಜತ್ ಬೇಗಂ ಸೇರಿದಂತೆನಾಲ್ವರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಸಾಲ ಮರುಪಾವತಿಸಿಲ್ಲ ಎಂಬ ಕಾರಣಕ್ಕೆ 30 ವರ್ಷದ ಮಹಿಳೆಯೊಬ್ಬರನ್ನು ಕಿಡ್ನಾಪ್ ಮಾಡಿ, ನಾಲ್ಕು ದಿನಗಳ...