ಹೈ ಸೆಕ್ಯುರಿಟಿ ವಲಯಕ್ಕೆ ಅಕ್ರಮವಾಗಿ ಪ್ರವೇಶಿಸಿ ಇರಾನ್ ಹಡಗಿನ ಫೋಟೋ ಮತ್ತು ವಿಡಿಯೋಗಳನ್ನು ತೆಗೆದ ಆರೋಪ ಇಬ್ಬರು ಮಾಧ್ಯಮ ಪ್ರತಿನಿಧಿಗಳು ಮತ್ತು ದೋಣಿ ಚಾಲಕನ ಬಂಧನ

55
ಕೊಚ್ಚಿಯಲ್ಲಿರುವ ಕೊಚ್ಚಿನ್ ಬಂದರಿನ ಹೈ ಸೆಕ್ಯುರಿಟಿ ವಲಯಕ್ಕೆ ಶನಿವಾರ ಅಕ್ರಮವಾಗಿ ಪ್ರವೇಶಿಸಿ ಇರಾನ್ ಹಡಗಿನ ಫೋಟೋ ಮತ್ತು ವಿಡಿಯೋಗಳನ್ನು ತೆಗೆದ ಆರೋಪದ ಮೇಲೆ ಇಬ್ಬರು ಮಾಧ್ಯಮ ಪ್ರತಿನಿಧಿಗಳು ಮತ್ತು ದೋಣಿ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಬಂಧಿತ ಆರೋಪಿಗಳು, ಭಾರತ ಸರ್ಕಾರದ ರಾಜತಾಂತ್ರಿಕ ನಿರ್ಧಾರದ ಭಾಗವಾಗಿ ಇಲ್ಲಿ ಲಂಗರು ಹಾಕಿದ ಇರಾನಿನ ಹಡಗಿನ ಛಾಯಾಚಿತ್ರ ಮತ್ತು ವಿಡಿಯೋ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂದರಿನ ಪೊಲೀಸರು ಪ್ರಮುಖ ಟಿವಿ ಚಾನೆಲ್‌ನ ವರದಿಗಾರ, ಅದರ ಕ್ಯಾಮೆರಾಮನ್ ಮತ್ತು ಸ್ಪೀಡ್ ಬೋಟ್ ಚಾಲಕನನ್ನು ಬಂಧಿಸಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಎಫ್‌ಐಆರ್ ಪ್ರಕಾರ, ಆರೋಪಿಗಳು ಇಂದು ಬೆಳಗ್ಗೆ 7.50 ರ ಸುಮಾರಿಗೆ ವಿಲ್ಲಿಂಗ್ಟನ್ ದ್ವೀಪದಲ್ಲಿರುವ ಕೊಚ್ಚಿನ್ ಬಂದರಿನ ಹೈ ಸೆಕ್ಯುರಿಟಿ ಪ್ರದೇಶವಾದ ಸದರ್ನ್ ಕಾಯಿಲ್ ಬರ್ತ್(SCB)ಗೆ ಕಾನೂನುಬಾಹಿರವಾಗಿ ಪ್ರವೇಶಿಸಿದ್ದಾರೆ. ಆರೋಪಿಗಳು ತಾವು ಮಾಡಿದ ವಿಡಿಯೋದ ದೃಶ್ಯಗಳನ್ನು ಪ್ರಸಾರ ಮಾಡಲು ಪ್ರಯತ್ನಿಸಿದ್ದು, ಇದು ದೇಶದ, ವಿಶೇಷವಾಗಿ ರಾಜ್ಯದ ಭದ್ರತೆಗೆ ಅಪಾಯವನ್ನುಂಟುಮಾಡಬಹುದು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.
ಬಂದರು ಅಪರಾಧ ಪೊಲೀಸರು. ಬಿಎನ್‌ಎಸ್‌ನ ಸೆಕ್ಷನ್ 329 (3) (ಕ್ರಿಮಿನಲ್ ಅತಿಕ್ರಮಣ) ಮತ್ತು ಅಧಿಕೃತ ರಹಸ್ಯ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ಸದ್ಯಕ್ಕೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...