ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ಬಂದಿಲ್ಲ ಭ್ರಷ್ಟ ಬಿವೈ ಯಡಿಯೂರಪ್ಪ ವಿಜೇಂದ್ರ ಯಡಿಯೂರಪ್ಪ ಇರುವ ತನಕ ಬಿಜೆಪಿ ಸೇರಲ್ಲ ::ಬಸನಗೌಡ ಪಾಟೀಲ್ ಯತ್ನಾಲ್

36

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ,ಬಿವೈ ವಿಜಯೇಂದ್ರ, ಸಂಸದ ಬಿವೈ ರಾಘವೇಂದ್ರ ಅವರಂತಹ ಕಡು ಭ್ರಷ್ಟ ಕುಟುಂಬ ಬಿಜೆಪಿಯಲ್ಲಿ ಇರುವವರೆಗೂ ಪಕ್ಷ ಸೇರಲು ಇಷ್ಟಪಡುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.


ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಬಿಜೆಪಿಯ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಬಂದಿಲ್ಲ. ಪುತ್ರನ ಮದುವೆಯ ಆಹ್ವಾನ ನೀಡಲು ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಕರೆಯುವ ನಿರೀಕ್ಷೆಯಲ್ಲಿ ಇರಲು ತಾನು ಹುಚ್ಚನಲ್ಲ ಎಂದು ಹೇಳಿದ ಅವರು, ಪಶ್ಚಿಮ ಬಂಗಾಳ, ಬಿಹಾರ್ ಅಥವಾ ಉತ್ತರ ಪ್ರದೇಶ ಚುನಾವಣೆಗಳ ನಂತರ ಬಿಜೆಪಿ ಕರೆದರೂ ನಿರ್ಧಾರ ಬದಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಾದೇಶಿಕ ಪಕ್ಷವನ್ನು ಕಟ್ಟುವುದಾಗಿ ಘೋಷಿಸಿದ ಅವರು, ಸೂಕ್ತ ಸಮಯದಲ್ಲಿ ಪಕ್ಷ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅದು ಜೆಸಿಬಿ ಚಿಹ್ನೆಯಡಿ ಕಾರ್ಯನಿರ್ವಹಿಸಲಿದೆಯೇ ಎಂಬ ಪ್ರಶ್ನೆಗೆ, ನೋಡೋಣ ಎಂದು ಉತ್ತರಿಸಿದ್ದಾರೆ.
ತಮ್ಮದೇ ಪಕ್ಷ ರಚನೆಯಾಗಲಿದ್ದು, 2028ರ ವಿಧಾನಸಭೆ ಚುನಾವಣೆ ನಂತರ ನಾನು ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಯತ್ನಾಳ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಬಿಜೆಪಿಯಲ್ಲಿ ಅಪ್ಪ-ಮಕ್ಕಳ ಸರ್ವಾಧಿಕಾರ ಬಿಜೆಪಿ ತೊರೆದು; ನೆ ಲ ನರೇಂದ್ರ ಬಾಬು ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ನೆಲ ಇಲ್ಲದ ಕಾರಣ ಆ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವು ಖಚಿತದ ನಂತರ ಪಾದಯಾತ್ರೆ ನಾಟಕಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ ಆಕ್ರೋಶ

ಬೆಂಗಳೂರು: ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ ಮೇಲೆ ಪಾದಯಾತ್ರೆ ಆರಂಭವಾಗಿದೆ...

ಮಾಜಿ ಸಚಿವ ನಾಗೇಂದ್ರ ಗೆ ಮತ್ತೆ ಸಂಕಷ್ಟ ಮರು ತೀವ್ರ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜಾರಿ...

ಸಾಲ ಮರುಪಾವತಿಸಿಲ್ಲ  ಕಾರಣಕ್ಕೆ  ಮಹಿಳೆ ಅಪಹರಿಸಿ ಅರೆ ಬೆತ್ತಲೆಗೊಳಿಸಿ  ಹಲ್ಲೆ ನಜತ್ ಬೇಗಂ ಸೇರಿದಂತೆನಾಲ್ವರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಸಾಲ ಮರುಪಾವತಿಸಿಲ್ಲ ಎಂಬ ಕಾರಣಕ್ಕೆ 30 ವರ್ಷದ ಮಹಿಳೆಯೊಬ್ಬರನ್ನು ಕಿಡ್ನಾಪ್ ಮಾಡಿ, ನಾಲ್ಕು ದಿನಗಳ...