ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

44

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ ಸಮಾರಂಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ದೇವಕಿ ಬಾರ್ಕೂರು ಅವರು ಶ್ರೀ ಮಾಸ್ತಿ ದುರ್ಗಾ ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷರು, ಬಾರ್ಕೂರಿನ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ಅವರಿಗೆ ಶಾಲು ಹೊದಿಸಿ ಸೀರೆ ನೀಡಿ, ಬಳೆ ತೊಡಿಸಿ, ಅರಶಿಣ ಕುಂಕುಮ ಹಚ್ಚಿ ಫಲ ಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾದ ದೇವಕಿ ಬಾರ್ಕೂರು, ಭಜನಾ ಗುರುಗಳು ಶ್ರೀ ಧರ್ಮಸ್ಥಳ ಭಜನಾ ಪರಿಷತ್ ಬ್ರಹ್ಮಾವರ ವಲಯದ ಉಪಾಧ್ಯಕ್ಷರಾದ ಶ್ರೀ ರಾಘವೇಂದ್ರ ರಾವ್

ಮಸ್ಕಿ ಬೈಲು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಸುರೇಶ್ ಎಂ (ಸುಭಾನು, )ಶ್ರೀ ಮಾಸ್ತಿ ದುರ್ಗಾ ಮಹಿಳಾ ಭಜನಾ ಮಂಡಳಿಯ ಸದಸ್ಯರು, ಅನ್ಸಾರಾಹ್ಮದ್, ಜ್ಯೋತಿ, ಸವಿತಾ ಉಪಸ್ಥಿತರಿದ್ದರು.

ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಸನ್ಮಾನ ಕಾರ್ಯಕ್ರಮ ಚೆನ್ನಾಗಿ ನಡೆಯಿತು. ಇದೇ ಸಂದರ್ಭದಲ್ಲಿ ಕರವೇ ಪದಾಧಿಕಾರಿಗಳನ್ನು ದೇವಸ್ಥಾನ ವತಿಯಿಂದ ಗೌರವಿಸಲಾಯಿತು.

Leave a comment

Leave a Reply

Your email address will not be published. Required fields are marked *

Related Articles

ಅಗ್ರಜ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸದಸ್ಯರಿಗೆ ಶೇ 15% ಡಿವಿಡೆಂಡ್ ಘೋಷಣೆ

ಉಡುಪಿ: ಅಗ್ರಜ ಸೌಹಾರ್ದ ಸಹಕಾರಿ ಸಂಘ(ನಿ), ಉಡುಪಿ ಇದರ ವಾರ್ಷಿಕ ಮಹಾಸಭೆಯು ಬನ್ನಂಜೆಯ ಶ್ರೀ ನಾರಾಯಣ...

ಅಗ್ರಜ ಸೌಹಾರ್ದ ಸಹಕಾರಿ ಸಂಘ (ನಿ.), ಉಡುಪಿಹಾಗೂ ಶ್ರೀ ಧೂಮಾವತಿ ಯುವಕ ಮಂಡಲ (ರಿ.) ನಿಟ್ಟೂರು ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರ

ನಿಟ್ಟೂರು: ಆ. 27: ಶ್ರೀ ಧೂಮಾವತಿ ಯುವಕ ಮಂಡಲ (ರಿ.) ವಿಷ್ಣುಮೂರ್ತಿ ನಗರ, ನಿಟ್ಟೂರು, ಹಾಗೂ...

ವ್ಯಸನಮುಕ್ತ ಭಾರತ  ವಿದ್ಯಾರ್ಥಿಗಳು ಹಾಗೂ ಯುವಜನತೆಯ ಸಂಕಲ್ಪವಾಗಬೇಕು  : ಮಾಜಿ ನಗರಸಭಾ ಸದಸ್ಯ ಕೆ. ವಿಜಯ ಕೊಡವೂರು

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್...