ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

3

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು, ಸಂತ್ರಸ್ಥೆಯ ಮಗಳ ಮೇಲೂ ಕಣ್ಣು ಹಾಕಿದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಬೆಂಗಳೂರಿನಲ್ಲಿ ಮೂವರು ಮಹಿಳೆಯರು ದೂರು ಸಲ್ಲಿಸಿದ್ದು, ಈ ದೂರನ್ನು ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.


ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಸಂತ್ರಸ್ಥೆ ಮಾತ್ರವಲ್ಲದೇ ಆಕೆಯ ಮಗಳ ಮೇಲೂ ಕಣ್ಣು ಹಾಕಿದ್ದ ಎಂದು ಸಂತ್ರಸ್ಥೆ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಸಂತ್ರಸ್ಥೆ ಆಡಿಯೋ ಬಿಡುಗಡೆ ಮಾಡಿದ್ದು, ಈ ಪ್ರಕರಣ ಇದೀಗ ಇಡೀ ಪೊಲೀಸ್ ಇಲಾಖೆಯನ್ನೇ ತಲೆತಗ್ಗಿಸುವಂತೆ ಮಾಡಿದೆ.
ದೂರು ದಾಖಲು ಈ ಸಂಬಂಧ ಸಂತ್ರಸ್ಥ ಮಹಿಳೆ ದೂರು ದಾಖಲಿಸಿದ್ದು, ದೂರಿನ ಪ್ರಕಾರ, ಸುಮಾರು ಎರಡು ವರ್ಷಗಳ ಹಿಂದೆ ಮಹಿಳೆಯೊಬ್ಬರ ಪತಿಯನ್ನು ಪ್ರಕರಣವೊಂದರಲ್ಲಿ ಬಂಧಿಸಲಾಗಿತ್ತು. ಇನ್ಸ್‌ಪೆಕ್ಟರ್ ತನ್ನ ಗಂಡನನ್ನು ಬಿಡುಗಡೆ ಮಾಡಬೇಕಾದರೆ, ತನ್ನೊಂದಿಗೆ ಲೈಂಗಿಕವಾಗಿ ಸಹಕರಿಸಬೇಕು ಎಂದು ಆಕೆಯ ಮೇಲೆ ಒತ್ತಡ ಹೇರಿದ್ದ. ಅಲ್ಲದೆ 25 ಲಕ್ಷ ರೂ ಬೇಡಿಕೆ ಇಟ್ಟಿದ್ದಲ್ಲದೆ, ಆಕೆಯ ಪತಿಯ ವಿರುದ್ಧ “ರೌಡಿ ಶೀಟ್” ತೆರೆಯುವುದಾಗಿ ಬೆದರಿಕೆ ಕೂಡ ಹಾಕಿದ್ದ ಎಂದು ಆರೋಪಿಸಲಾಗಿದೆ.
ಸೇವೆಯಿಂದ ಅಮಾನತು ಇನ್ನು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಅವರು ಆರೋಪಿ ಇನ್ಸ್ ಪೆಕ್ಟರ್ ಸಂದೇಶ್ ರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಏನಿದು ಪ್ರಕರಣ? ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಎಂಬುವವರ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ.

ಕೌಟುಂಬಿಕ ವ್ಯಾಜ್ಯ ಅಥವಾ ದೂರು ನೀಡಲು ಬರುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಈತ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಸಂತ್ರಸ್ತೆಯೊಬ್ಬಳ ಗಂಡನನ್ನು ಕೇಸ್‌ನಲ್ಲಿ ಸಿಲುಕಿಸಿ, ಆತನನ್ನು ಬಿಡುಗಡೆ ಮಾಡಲು ‘ನನ್ನ ಜೊತೆ ಮಲಗಬೇಕು ಅಥವಾ 25 ಲಕ್ಷ ರೂಪಾಯಿ ನೀಡಬೇಕು’ ಎಂದು ಇನ್ಸ್‌ಪೆಕ್ಟರ್ ಧಮಕಿ ಹಾಕಿರುವ ವಿಷಯ ಈಗ ಬೆಳಕಿಗೆ ಬಂದಿದೆ.
ನಾನು ಪೋಸ್ಟಿಂಗ್‌ಗಾಗಿ ಗೃಹಸಚಿವರಿಗೆ 50 ಲಕ್ಷ ನೀಡಿ ಬಂದಿದ್ದೇನೆ’ ಎಂದು ಈತ ಅಹಂಕಾರದಿಂದ ಹೇಳಿಕೊಂಡಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಕಾಂಪೌಂಡ್ ಹಾರಿ ಮನೆಗೇ ನುಗ್ಗಿದ್ದ ಸಂದೇಶ್ ಅಂತೆಯೇ ಇನ್ಸ್‌ಪೆಕ್ಟರ್ ಸಂದೇಶ್ ರಾತ್ರಿಯಲ್ಲಿ ಕಾಂಪೌಂಡ್ ಗೋಡೆ ಹಾರಿ ತನ್ನ ಮನೆಗೆ ನುಗ್ಗಿ, ತನ್ನ ಕೈ ಹಿಡಿದು ಎಳೆದುಕೊಂಡು ಹೋಗಿ, ನೃತ್ಯ ಮಾಡಲು ಒತ್ತಾಯಿಸುತ್ತಿದ್ದ ಎಂದು ದೂರುದಾರೆ ಆರೋಪಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನೇಮಕಗೊಂಡಾಗಲೂ ಆತ ಇದೇ ರೀತಿ ವರ್ತಿಸಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ. ತಾನು ಮಾತ್ರವಲ್ಲದೇ ಪಾಸ್‌ಪೋರ್ಟ್ ಪರಿಶೀಲನೆ ಮತ್ತು ಇತರ ಅಧಿಕೃತ ಕೆಲಸಗಳಿಗಾಗಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಮಹಿಳೆಯರು ಸಹ ಕಿರುಕುಳಕ್ಕೊಳಗಾಗಿದ್ದರು.


ಆದರೆ ಅನೇಕ ಸಂತ್ರಸ್ಥೆಯರು ದೂರು ದಾಖಲಿಸಲು ಹಿಂಜರಿಯುತ್ತಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ. ಸಂತ್ರಸ್ತೆ ಮಗಳ ಮೇಲೂ ಕಣ್ಣು: ಆಡಿಯೋ ವೈರಲ್ ಈ ಪ್ರಕರಣದಲ್ಲಿ ಇನ್ನೊಂದು ಪ್ರಮುಖ ಅಂಶವೆಂದರೆ, ಈ ಇನ್ಸ್‌ಪೆಕ್ಟರ್‌ ತಾನು ಲೈಂಗಿಕವಾಗಿ ಬಳಸಿಕೊಂಡ ಮಹಿಳೆಯೊಬ್ಬರ ಅಪ್ರಾಪ್ತ ಮಗಳ ಮೇಲೂ ಕಣ್ಣು ಹಾಕಿದ್ದ. ಆಕೆ ಓದುತ್ತಿರುವ ಕಾಲೇಜಿಗೆ ಹೋಗುತ್ತೇನೆ ಎಂದು ಫೋನ್‌ನಲ್ಲಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದ.
ಈ ಆರೋಪಕ್ಕೆ ಸಂಬಂಧಿಸಿದ ಆಡಿಯೋವೊಂದು ಈಗ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೊದಲೇ ದೂರು ದಾಖಲಾಗಿದ್ದರೂ ಕ್ರಮವಿಲ್ಲ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಈ ಹಿಂದೆ ದೂರು ಸಲ್ಲಿಸಿದ್ದರೂ, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ದೂರುದಾರರು ತಿಳಿಸಿದ್ದಾರೆ.

ಮಂಗಳೂರು ಪೊಲೀಸರ ನ್ಯಾಯಯುತ ತನಿಖೆಯ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿ, ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಥವಾ ಸಿಐಡಿಗೆ ವಹಿಸಬೇಕು ಮತ್ತು ತನಿಖೆಯ ಸಮಯದಲ್ಲಿ ಅಧಿಕಾರಿಯನ್ನು ಕರ್ತವ್ಯದಿಂದ ದೂರವಿಡಬೇಕು ಎಂದು ಸಂತ್ರಸ್ಥೆ ಒತ್ತಾಯಿಸಿದರು. ಕೊನೆಗೂ ಎಚ್ಚೆತ್ತ ಪೊಲೀಸ್ ಇಲಾಖೆ ಇನ್ನು ಸಂತ್ರಸ್ಥೆಯ ಆಡಿಯೋ ವೈರಲ್ ಆಗುತ್ತಲೇ ಕೊನೆಗೂ ಎಚ್ಚೆತ್ತ ಪೊಲೀಸ್ ಇಲಾಖೆ ಇಲಾಖಾ ತನಿಖೆಯನ್ನು ಪ್ರಾರಂಭಿಸಿದೆ.
ಈ ವಿಷಯಕ್ಕೆ ಪ್ರತಿಕ್ರಿಯಿಸಿದ ಡಿಸಿಪಿ ಮಿಥುನ್, ಉತ್ತರ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆ ಪ್ರಾರಂಭವಾಗಿದೆ ಮತ್ತು ವರದಿ ಸಲ್ಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಏತನ್ಮಧ್ಯೆ, ರಾಜ್ಯ ಮಹಿಳಾ ಆಯೋಗವು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಪತ್ರ ಬರೆದಿದ್ದು, ಮಹಿಳೆಯರ ರಕ್ಷಣೆಯ ಜವಾಬ್ದಾರಿಯುತ ಸರ್ಕಾರಿ ಅಧಿಕಾರಿಯೊಬ್ಬರು ಅಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದರೆ ಅದು ಗಂಭೀರ ವಿಷಯವಾಗಿದೆ ಎಂದು ಹೇಳಿದ್ದಾರೆ. ಪ್ರಕರಣವನ್ನು ನಿಯಮಗಳ ಪ್ರಕಾರ ಪರಿಶೀಲಿಸಿ, ಶಿಸ್ತು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಆಯೋಗವು ನಿರ್ದೇಶಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...

ಪೂರ್ಣಿಮಾ ಶೆಟ್ಟಿಗೆ ‘ಮಾನವ ಹಕ್ಕುಗಳ ಸಬಲೀಕರಣ ಮಾನವೀಯ ಶ್ರೇಷ್ಠತೆ’ ಪ್ರಶಸ್ತಿ ಗೌರವ

ಸಾಮಾಜಿಕ ಸೇವಾ ಕಾರ್ಯಕರ್ತೆ ಹಾಗೂ ‘ವಸುದೈವ ಕುಟುಂಬಕಂ’ ಎನ್‌ಜಿಒ ಸಂಸ್ಥೆಯ ಸಂಸ್ಥಾಪಕಿ ಪೂರ್ಣಿಮಾ ಶೆಟ್ಟಿ ಅವರಿಗೆ...

ಸಾರ್ವಜನಿಕ ಶೌಚಾಲಯಗಳಲ್ಲಿ ಕನಿಷ್ಠ ದರ ನಿಗದಿಪಡಿಸದೆ ಸುಲಿಗೆ, ಕ್ರಮಕ್ಕೆಅಗ್ರಹ:: ಕರವೇ ಜಿಲ್ಲಾಧ್ಯಕ್ಷ ಅ ರಾ ಪ್ರಭಾಕರ್ ಪೂಜಾರಿ

ಉಡುಪಿ: ಸಾಂಸ್ಕೃತಿಕ ನಗರಿ, ಪ್ರವಾಸಿ ತಾಣಗಳ ಬೀಡು ಉಡುಪಿ ಇಂದು ಶೌಚಾಲಯಗಳ ಹೆಸರಿನಲ್ಲಿ ನಡೆಯುತ್ತಿರುವ ಬಹಿರಂಗ...

ಕೇರಳ ಮೂಲದ ಟಿಪ್ಪರ್ ಚಾಲಕರ ಅತಿರೇಕದ ಗೂಂಡಾ ವರ್ತನೆಗೆ ಸಂಬಂಧ ಪಟ್ಟ ಇಲಾಖೆಯಿಂದ ಕಡಿವಾಣ ಅಗತ್ಯ:: ಅನ್ಸಾರ್ ಅಹಮದ್

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಬೆಳ್ಮಣ್ ನಲ್ಲಿ ಕಾರ್ಯಾಚರಿಸುತ್ತಿರುವ ಜಲ್ಲಿ ಕ್ರಷರ್ ಗಳಿಗೆ ಬರುತ್ತಿರುವ ಕೇರಳ...