ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

37

ಬೆಂಗಳೂರು: ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ  ಇಂದು ಯುಗಾದಿ ಹಬ್ಬದಂದೇ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಹುಲಿ ಮತ್ತು ಹೊಸ ಮುಖಕ್ಕೆ ಅವಕಾಶ ನೀಡಿದೆ. ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ,ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ಟಿ ದಾಸಕರಿಯಪ್ಪ ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ. ದಾವಣಗೆರೆ ರೆಬೆಲ್ ಬಣದ ಅಭ್ಯರ್ಥಿಗೆ ಬಿಜೆಪಿ ಮಣೆ ಹಾಕಿದೆ.
ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ್ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ. ಬಾಗಲಕೋಟೆಯಲ್ಲಿ ಮಾಜಿ ಶಾಸಕ ಎಚ್.ವೈ. ಮೇಟಿ ಅವರ ನಿಧನ ನಂತರ ಉಪ ಚುನಾವಣೆ ಘೋಷಣೆಯಾದ ನಂತರ ಕಾಂಗ್ರೆಸ್ನಲ್ಲಿ ಭಾರೀ ಗದ್ದಲ ಉಂಟಾಗಿದೆ.
ದಾವಣಗೆರೆ ದಕ್ಷಿಣದಲ್ಲಿ ಜಾತಿ ಲೆಕ್ಕಾಚಾರದಲ್ಲಿ ತಂತ್ರವನ್ನು ಬಿಜೆಪಿ ಹೆಣೆದಿದೆ. ಎಸ್‌ಟಿ ಸಮುದಾಯದ ಟಿ.ಶ್ರೀನಿವಾಸದಾಸ ಕರಿಯಪ್ಪಗೆ ಟಿಕೆಟ್ ನೀಡಿದೆ. ಈ ಮೂಲಕ ಅಹಿಂದ ಮತ್ತು ಲಿಂಗಾಯತ ವರ್ಗದ ಮತಗಳ ಮೇಲೆ ಪಕ್ಷ ಕಣ್ಣಿಟ್ಟಿದೆ.

Leave a comment

Leave a Reply

Your email address will not be published. Required fields are marked *

Related Articles

ವೃತ ನಿರೀಕ್ಷಕ ಧನಂಜಯ್ ಗೆ ಸಡ್ಡು ಹೊಡೆದ ನರಸೀಪುರ ಗಣಪತಿ ಮೆರವಣಿಗೆ ಮಸೀದಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

“ಟಿ. ನರಸೀಪುರ: ಮಸೀದಿ ಮುಂಭಾಗ ಗಣಪತಿ ಮೆರವಣಿಗೆ ವಿಚಾರದಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್...

ಪಾಕಿಸ್ತಾನ ನಿರ್ಮಿತ ಅಪಾಯಕಾರಿ ಸೌಂದರ್ಯವರ್ಧಕ ಉತ್ಪನ್ನಗಳು ಭಾರತೀಯ ಮಾರುಕಟ್ಟೆಗೆ ಬಳಸದಂತೆ ಎಚ್ಚರಿಸಿದ ಕೇಂದ್ರ ಅರೋಗ್ಯ ಇಲಾಖೆ

ನವದೆಹಲಿ: “ಮೇಡ್ ಇನ್ ಪಾಕಿಸ್ತಾನ್” (ಪಾಕಿಸ್ತಾನದಲ್ಲಿ ತಯಾರಾದ) ಎಂದು ಲೇಬಲ್ ಮಾಡಲಾದ ಮತ್ತು ಅತಿಯಾದ ಪ್ರಮಾಣದ...

ರಾಜ್ಯ ಬಿಜೆಪಿಯಲ್ಲಿ ಅಪ್ಪ-ಮಕ್ಕಳ ಸರ್ವಾಧಿಕಾರ ಬಿಜೆಪಿ ತೊರೆದು; ನೆ ಲ ನರೇಂದ್ರ ಬಾಬು ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ನೆಲ ಇಲ್ಲದ ಕಾರಣ ಆ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವು ಖಚಿತದ ನಂತರ ಪಾದಯಾತ್ರೆ ನಾಟಕಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ ಆಕ್ರೋಶ

ಬೆಂಗಳೂರು: ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ ಮೇಲೆ ಪಾದಯಾತ್ರೆ ಆರಂಭವಾಗಿದೆ...