ಜೆರುಸಲೇಂ ಅಲ್-ಅಕ್ಸಾ ಮಸೀದಿ  ಮೇಲೆ ಇರಾನ್ ಕ್ಷಿಪಣಿ ದಾಳಿ

36

ಈದ್ ಅಲ್-ಫಿತರ್‌ ದಿನವೇ ಜೆರುಸಲೇಂ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಅಲ್-ಅಕ್ಸಾ ಮಸೀದಿಯಿಂದ ಕೇವಲ ನೂರು ಮೀಟರ್‌ಗಳಷ್ಟು ದೂರದಲ್ಲಿ ಕ್ಷಿಪಣಿ ಬಿದ್ದಿದೆ. ಇದರಿಂದಾಗಿ ನೂರಾರು ಮುಸ್ಲಿಂರು ನಗರದ ಹೊರಗೆ ಪ್ರಾರ್ಥನೆ ಸಲ್ಲಿಸುವಂತಾಯಿತು. ಸುಮಾರು 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮುಸ್ಲಿಂರಿಗೆ ಮಸೀದಿ ಬಳಿಗೆ ಪ್ರವೇಶ ನಿರ್ಬಂಧಿಸಲಾಯಿತು.

ಈದ್ ಅಲ್-ಫಿತರ್ ಆಚರಣೆ ವೇಳೆಯಲ್ಲಿ ಇರಾನ್ ಜೆರುಸಲೇಂ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಮುಸ್ಲಿಂ, ಕ್ರಿಶ್ಚಿಯರನ್ನರ್ ಮತ್ತು ಯಹೋದಿಗಳ ಪ್ರಾರ್ಥನಾ ಮಂದಿರದಿಂದ ಕೆಲವೇ ಮೀಟರ್ ದೂರದಲ್ಲಿ ಈ ದಾಳಿ ನಡೆದಿದೆ ಎಂದು ಇಸ್ರೇಲ್ ತಿಳಿಸಿದೆ. ಇದೇ ಮುಲ್ಲಾಗಳ ನಿಜವಾದ ಮುಖವಾಗಿದೆ ಎಂದು ಇಸ್ರೇಲಿ ವಿದೇಶಾಂಗ ಸಚಿವಾಲಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

  ನಾಗರಿಕ ಸ್ಥಳವಾಗಲಿ ಅಥವಾ ಪ್ರಾರ್ಥನಾ ಮಂದಿರಗಳಿರುವ ಪವಿತ್ರ ತಾಣವಾಗಲೀ ಒಟ್ಟಾರೇ ಇಸ್ರೇಲ್ ರಾಷ್ಟ್ರವನ್ನು ನಾಶಪಡಿಸಬೇಕು ಎಂಬ ಇರಾನ್ ಆಡಳಿತದ ಉದ್ದೇಶಕ್ಕೆ ಈ ದಾಳಿಯೇ ಸಾಕ್ಷಿಯಾಗಿದೆ ಎಂದು ಐಡಿಎಫ್ ಹೇಳಿಕೆಯಲ್ಲಿ ತಿಳಿಸಿದೆ.

ನೂರಾರು ಮುಸ್ಲಿಂ ಆರಾಧಕರು ಅಲ್-ಅಕ್ಸಾ ಮಸೀದಿ ಬಳಿಗೆ ತೆರಳಲು ಸಾಧ್ಯವಾಗಲಿಲ್ಲ. ಇರಾನ್‌ ಜೊತೆಗೆ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಭದ್ರತಾ ಕಾಳಜಿಯಿಂದ ಮಸೀದಿ ಬಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.

Leave a comment

Leave a Reply

Your email address will not be published. Required fields are marked *

Related Articles

ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ಹೊಸ ಜಂಟಿರಕ್ಷಣಾ ಒಪ್ಪಂದಕ್ಕೆ ಸಹಿ

“ಅಂಕಾರಾ: ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ಶುಕ್ರವಾರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ ಎಂದು...

ಹೊರ್ಮುಜ್ ಜಲಸಂಧಿಯಲ್ಲಿ ಕ್ಷಿಪಣಿ ದಾಳಿ: ಭಾರತೀಯ ನಾವಿಕ ಸಾವು, ಇರಾನ್ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಭಾರತ

ನವದೆಹಲಿ: ಹಾರ್ಮುಜ್ ಜಲಸಂಧಿಯಲ್ಲಿ ಯುಎಇಗೆ ಸೇರಿದ ಎರಡು ತೈಲ ಸಾಗಣೆ ಹಡಗುಗಳ ಮೇಲೆ ಇರಾನ್ ನಡೆಸಿದ...

ಭಾರತ ವಿರುದ್ಧ ಯುದ್ಧಕ್ಕೂ ಹಿಂಜರಿಯುವುದಿಲ್ಲ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಉದ್ಧಟತನ

“ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದದ ವಿವಾದದ ನಡುವೆ ಭಾರತಕ್ಕೆ ಪಾಕಿಸ್ತಾನ ಮತ್ತೊಮ್ಮೆ ಯುದ್ಧದ ಬೆದರಿಕೆ ಹಾಕಿದೆ....

ತನ್ನ ಪ್ರದೇಶಗಳಿಗೆ ಇಸ್ಲಾಮಿ ಹೆಸರುಗಳ ಕೈ ಬಿಟ್ಟು ಹಿಂದೂ ಹೆಸರು ಮರುನಾಮಕರಣ, ಬದಲಾಗುತ್ತಿದೇಯಾ ಪಾಕಿಸ್ತಾನ??

ಲಾಹೋರ್: ಭಾರತದ ಪ್ರಧಾನಿ ಮೋದಿ ಅಖಂಡ ಭಾರತದ ಕುರಿತು ಮಾಡಿದ್ದ ಭಾಷಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲಿ...