ಯುಎಇ ಮೇಲೆ ಇರಾನ್ ಕ್ಷಿಪಣಿ ಮತ್ತು  ಡ್ರೋನ್ ದಾಳಿ ಐವರು ಐವರು ಭಾರತೀಯರಿಗೆ ಗಾಯ

39

“ಇರಾನ್‌ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಕೈಗಾರಿಕಾ ವಲಯದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಐವರು ಭಾರತೀಯರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಅಬುಧಾಬಿಯ ಕೈಗಾರಿಕಾ ವಲಯದಲ್ಲಿ ಘಟನೆ ನಡೆದಿದೆ. ದಾಳಿಯಲ್ಲಿ ಐದು ಮಂದಿ ಭಾರತೀಯರಿಗೆ ಗಾಯಗಳಾಗಿವೆ ಎಂದು ಸರ್ಕಾರದ ಮಾಧ್ಯಮ ಕಚೇರಿ ಮಾಹಿತಿ ನೀಡಿದೆ.

ಯುಎಇ ರಕ್ಷಣಾ ಸಚಿವಾಲಯದ ಮಾಹಿತಿ ನೀಡಿ, ಇರಾನ್‌ನಿಂದ ಹಾರಿಬಂದ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ವಾಯು ರಕ್ಷಣಾ ವ್ಯವಸ್ಥೆ ತಡೆಯುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಿದೆ. ಬ್ಯಾಲಿಸ್ಟಿಕ್ ಕ್ಷಿಪಣಿಯ ಅವಶೇಷಗಳು ನೆಲಕ್ಕೆ ಬಿದ್ದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ.

ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆಂದು ತಿಳಿಸಿದ್ದಾರೆ. ಈ ಘಟನೆ ಎಮಿರೇಟ್‌ನ ಖಲೀಫಾ ಆರ್ಥಿಕ ವಲಯಗಳ ಪ್ರದೇಶದಲ್ಲಿ ನಡೆದಿದ್ದು, ಒಂದಕ್ಕಿಂತ ಹೆಚ್ಚು ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

Leave a comment

Leave a Reply

Your email address will not be published. Required fields are marked *

Related Articles

ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ಹೊಸ ಜಂಟಿರಕ್ಷಣಾ ಒಪ್ಪಂದಕ್ಕೆ ಸಹಿ

“ಅಂಕಾರಾ: ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ಶುಕ್ರವಾರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ ಎಂದು...

ಹೊರ್ಮುಜ್ ಜಲಸಂಧಿಯಲ್ಲಿ ಕ್ಷಿಪಣಿ ದಾಳಿ: ಭಾರತೀಯ ನಾವಿಕ ಸಾವು, ಇರಾನ್ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಭಾರತ

ನವದೆಹಲಿ: ಹಾರ್ಮುಜ್ ಜಲಸಂಧಿಯಲ್ಲಿ ಯುಎಇಗೆ ಸೇರಿದ ಎರಡು ತೈಲ ಸಾಗಣೆ ಹಡಗುಗಳ ಮೇಲೆ ಇರಾನ್ ನಡೆಸಿದ...

ಭಾರತ ವಿರುದ್ಧ ಯುದ್ಧಕ್ಕೂ ಹಿಂಜರಿಯುವುದಿಲ್ಲ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಉದ್ಧಟತನ

“ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದದ ವಿವಾದದ ನಡುವೆ ಭಾರತಕ್ಕೆ ಪಾಕಿಸ್ತಾನ ಮತ್ತೊಮ್ಮೆ ಯುದ್ಧದ ಬೆದರಿಕೆ ಹಾಕಿದೆ....

ತನ್ನ ಪ್ರದೇಶಗಳಿಗೆ ಇಸ್ಲಾಮಿ ಹೆಸರುಗಳ ಕೈ ಬಿಟ್ಟು ಹಿಂದೂ ಹೆಸರು ಮರುನಾಮಕರಣ, ಬದಲಾಗುತ್ತಿದೇಯಾ ಪಾಕಿಸ್ತಾನ??

ಲಾಹೋರ್: ಭಾರತದ ಪ್ರಧಾನಿ ಮೋದಿ ಅಖಂಡ ಭಾರತದ ಕುರಿತು ಮಾಡಿದ್ದ ಭಾಷಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲಿ...