ಅಸ್ಸಾಂ ಚುನಾವಣೆ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್

33

ಕರ್ನಾಟಕದ ನಂತರ ಕಾಂಗ್ರೆಸ್ ಇದೀಗ ಅಸ್ಸಾಂ ಚುನಾವಣೆಗೂ ಐದು ಗ್ಯಾರಂಟಿಗಳನ್ನು ಘೋಷಿಸಿದ್ದು, ಮಹಿಳೆಯರಿಗೆ ಮಾಸಿಕ ನಗದು ವರ್ಗಾವಣೆ ಮಾಡುವುದಾಗಿ ಭರವಸೆ ನೀಡಿದೆ. ಅಸ್ಸಾಂ ಲಖಿಂಪುರ ಜಿಲ್ಲೆಯ ನೌಬೋಯಿಚಾದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ತಮ್ಮ ಪಕ್ಷದ “ಐದು ಗ್ಯಾರಂಟಿಗಳನ್ನು” ಘೋಷಿಸಿದರು.

ಇದರಲ್ಲಿ ಮಹಿಳೆಯರ ಕಲ್ಯಾಣ, ಎಲ್ಲರಿಗೂ ಆರೋಗ್ಯ ರಕ್ಷಣೆ, ಭೂ ಹಕ್ಕು ಮತ್ತು ನ್ಯಾಯದ ಮೇಲೆ ಗಮನ ಕೇಂದ್ರೀಕರಿಸಲಾಗಿದೆ. ಇದೇ ವೇಳೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಅಸ್ಸಾಂ ಸರ್ಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ ಮತ್ತು ಅದರ ನಾಯಕರು ಹಾಗೂ ಅವರ ಕುಟುಂಬಗಳ “ಖಜಾನೆ ತುಂಬುವ” ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಮಹಿಳೆಯರಿಗೆ ಮಾಸಿಕ ನಗದು ವರ್ಗಾವಣೆ ಮತ್ತು ವ್ಯವಹಾರ ಆರಂಭಿಸಲು ಅಥವಾ ವಿಸ್ತರಿಸಲು ಇಚ್ಛಿಸುವ ಮಹಿಳೆಯರಿಗೆ ಹೆಚ್ಚುವರಿ 50,000 ರೂ. ಸಹಾಯ ಸೇರಿದಂತೆ ಪಕ್ಷದ ‘ಐದು ಗ್ಯಾರಂಟಿಗಳನ್ನು’ ಬಿಡುಗಡೆ ಮಾಡಿದರು. “ನಮ್ಮ ನಗದು ವರ್ಗಾವಣೆ ಬೇಷರತ್ತಾಗಿರುತ್ತದೆ.

ಬಿಜೆಪಿ ಸರ್ಕಾರ ಮಾಡುವಂತೆ, ಮಹಿಳೆಯರು ತಮ್ಮ ಪಕ್ಷದ ಸದಸ್ಯರಾಗಬೇಕು ಎಂಬ ಷರತ್ತು ಇರುವುದಿಲ್ಲ” ಎಂದು ಅವರು ಹೇಳಿದರು. ರಾಜ್ಯದ ಪ್ರತಿ ಕುಟುಂಬಕ್ಕೆ 25 ಲಕ್ಷ ರೂ. ನಗದು ರಹಿತ ಆರೋಗ್ಯ ವಿಮೆ, 10 ಲಕ್ಷ ಸ್ಥಳೀಯ ಜನರಿಗೆ ಶಾಶ್ವತ ಭೂ ಪಟ್ಟಾ ಮತ್ತು ರಾಜ್ಯದ ಹಿರಿಯ ನಾಗರಿಕರಿಗೆ ತಿಂಗಳಿಗೆ 1,250 ರೂ. ನೀಡುವುದಾಗಿ ಖರ್ಗೆ ಭರವಸೆ ನೀಡಿದರು.

“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 100 ದಿನಗಳಲ್ಲಿ ಜುಬೀನ್ ಗರ್ಗ್ ಸಾವಿನ ಪ್ರಕರಣದ ಕುರಿತು ತನಿಖೆ ನಡೆಸಿ, ನ್ಯಾಯ ಒದಗಿಸುವುದಾಗಿ ನಾವು ಪ್ರತಿಜ್ಞೆ ಮಾಡುತ್ತೇವೆ” ಎಂದು ಖರ್ಗೆ ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...