ಮಣಿಪುರದಲ್ಲಿ ಮತ್ತೆ ಹಿಂಸಾಚಾರ 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ ಪೊಲೀಸ್ ಠಾಣೆಗೆ ಬೆಂಕಿ ಪ್ರತಿಭಟನೆ ಸಿಆರ್ ಪಿಎಫ್ ಫೈರಿಂಗ್

33
ಇಂಫಾlಲ್: ಮಣಿಪುರ ಸರ್ಕಾರ ಐದು ಕಣಿವೆ ಜಿಲ್ಲೆಗಳಲ್ಲಿ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿ ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಮೂರು ದಿನಗಳ ಕಾಲ ಸ್ಥಗಿತಗೊಳಿಸಿದೆ. ಗೃಹ ಆಯುಕ್ತ ಎನ್. ಅಶೋಕ್ ಕುಮಾರ್, ಮಂಗಳವಾರದಿಂದ ಐದು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ನಿಷೇಧಿಸುವ ಆದೇಶಕ್ಕೆ ಸಹಿ ಹಾಕಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.


ಮಣಿಪುರದ ಐದು ಜಿಲ್ಲೆಗಳಾದ ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ತೌಬಲ್, ಕಾಕ್ಚಿಂಗ್ ಮತ್ತು ಬಿಷ್ಣುಪುರಗಳಲ್ಲಿ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ತಪ್ಪು ಮಾಹಿತಿ ಮತ್ತು ವದಂತಿಗಳನ್ನು ತಡೆಗಟ್ಟಲು… ಈ ಐದು ಜಿಲ್ಲೆಗಳಲ್ಲಿ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿ ಮತ್ತು ವಿಪಿಎನ್ ಸೇವೆಗಳು ಸೇರಿದಂತೆ ಇಂಟರ್ನೆಟ್ ಸೇವೆಗಳು ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದೆ.
ನಿನ್ನೆ ರಾತ್ರಿ ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮಕ್ಕಳ ತಾಯಿ ಗಾಯಗೊಂಡಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಸ್ಥಳೀಯರು ಇಂದು ಬೆಳಿಗ್ಗೆ ಪ್ರತಿಭಟನೆ ನಡೆಸಿ, ಪ್ರದೇಶದ ಪೆಟ್ರೋಲ್ ಪಂಪ್ ಬಳಿ ಎರಡು ತೈಲ ಟ್ಯಾಂಕರ್‌ಗಳು ಮತ್ತು ಒಂದು ಟ್ರಕ್‌ಗೆ ಬೆಂಕಿ ಹಚ್ಚಿದರು.
ಮೊಯಿರಾಂಗ್ ಪೊಲೀಸ್ ಠಾಣೆಯ ಮುಂದೆ ಟೈರ್‌ಗಳನ್ನು ಸುಟ್ಟು ಪ್ರತಿಭಟಿಸಿದ್ದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರದೇಶದಲ್ಲಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದು ಫೈರಿಂಗ್ ನಲ್ಲಿ ಇಬ್ಬರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೊಯಿರಾಂಗ್ ಟ್ರೋಂಗ್ಲಾಬಿ ಪ್ರದೇಶದ ಮನೆಯೊಂದರ ಮೇಲೆ ಶಂಕಿತ ಉಗ್ರಗಾಮಿಗಳು ಬಾಂಬ್ ಎಸೆದಿದ್ದರು. ದಾಳಿಯಲ್ಲಿ ಐದು ವರ್ಷದ ಬಾಲಕ ಮತ್ತು ಆರು ತಿಂಗಳ ಮಗು ಮೃತಪಟ್ಟಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ
. ಮುಖ್ಯಮಂತ್ರಿ ವೈ. ಖೇಮ್‌ಚಂದ್ ಸಿಂಗ್ ಈ ದಾಳಿಯನ್ನು ಅನಾಗರಿಕ ಕೃತ್ಯ ಎಂದು ಹೇಳಿದ್ದಾರೆ. ದಾಳಿಗೆ ಕಾರಣರಾದವರನ್ನು ಗುರುತಿಸಿ ಕಾನೂನಿನಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜನರಿಗೆ ಭರವಸೆ ನೀಡಿದರು.

Leave a comment

Leave a Reply

Your email address will not be published. Required fields are marked *

Related Articles

ಎಸ್ ಐಆರ್ ಮತದಾರ ಪಟ್ಟಿ ಪರಿಷ್ಕರಣೆ ಮೂರು ರಾಷ್ಟ್ರಗಳಲ್ಲಿ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ರಾಯಭಾರಿ ಹೆಸರು ನಾಪತ್ತೆ

ನವದೆಹಲಿ: ಯುಎಇ ಮತ್ತು ಈಜಿಪ್ಟ್ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ದೇಶದ ಮಾಜಿ ರಾಯಭಾರಿಯೊಬ್ಬರು...

ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಪೀಠ ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಲಡಾಖ್‌ನ ಜನರಿಗಾಗಿ ಕೇಂದ್ರ ಸರ್ಕಾರ ಮಹತ್ವದ ಮತ್ತು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಲಡಾಖ್‌ನಲ್ಲಿ ಜಮ್ಮು...

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ...